ಕೊಡಗು:ಯುವತಿಯ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡು ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ಸಮೀಪದ ಹಾಕತ್ತೂರಿನ ಅಶ್ರಪ್ ಎಂಬ ಯುವಕ ಕಳೆದ 15 ದಿನಗಳಿಂದ ಯುವತಿಯ ಹೆಸರಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಚಾಟಿಂಗ್​ ಮಾಡುತ್ತಿದ್ದ. ತನ್ನ ಹೆಸರು ಅರುಣಾ ಎಂದು ಹೇಳಿಕೊಂಡಿದ್ದ ಉಪಾಯವಾಗಿ ಆತನನ್ನು ಮಡಿಕೇರಿಗೆ ಕರೆಸಿಕೊಳ್ಳಲಾಗಿತ್ತು.
ಬಸ್​ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಆತನಿಗೆ ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಸಿಕ್ಕಿಬಿದ್ದಾಗ ನನ್ನೊಟ್ಟಿಗೆ ಮತ್ತಿಬ್ಬರು ಇದ್ದಾರೆ ಎಂದು ಆರೋಪಿ ಮಾಹಿತಿ ನೀಡಿದ್ದು, ಇವನ ಹಿಂದೆ ದೊಡ್ಡ ಜಾಲ ಇರುವ ಶಂಕೆ ವ್ಯಕ್ತವಾಗಿದೆ.
ಸದ್ಯ ಪ್ರಕರಣವನ್ನು ದಾಖಲಿಸಿಕೊಂಡಿರುವ ಮಡಿಕೇರಿ ಪೊಲಿಸರು ಪ್ರಕರಣದಲ್ಲಿ ಇನ್ನು ಯಾರಾದರೂ ಭಾಗಿಯಾಗಿದ್ದಾರಾ ಎಂಬ ಆಯಾಮದಲ್ಲಿ ತನಿಖೆ ಕೈಗೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕೊಡಗು: ಯುವತಿಯ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮೆಸೇಜ್​ ಮಾಡು ಯುವಕನನ್ನು ಉಪಾಯವಾಗಿ ಕರೆಸಿಕೊಂಡು ಥಳಿಸಿ, ಪೊಲೀಸರ ವಶಕ್ಕೆ ನೀಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.#Facebook#Message#Woman#YoungMan#MadikeriPolicepic.twitter.com/itdomYs233
— Vijayavani (@VVani4U)June 21, 2021

ಅಪಘಾತದಲ್ಲಿ ಸತ್ತವನ ಡಿಎನ್‌ಎ ಆಯ್ತು ಮ್ಯಾಚ್‌- 10 ವರ್ಷಗಳ ಬಳಿಕ ಪ್ರತ್ಯಕ್ಷನಾದವ ಯಾರು?

ವಿದ್ಯುತ್​ ಶಾಕ್​ನಿಂದ ಹಸು ಸಾವು: ರೈತನಿಗೆ 90 ಸಾವಿರ ರೂ. ಪರಿಹಾರ ನೀಡಲು ನಿರ್ದೇಶನ

https://www.vijayavani.net/s-british-woman-abbie-bela-says-she-fell-in-love-with-alien/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eight =
Remember me
