ವಿಜಯಪುರ:ಕೃಷ್ಣಾ ನದಿಗೆ ಜಿಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ಘಟನೆ ನಡೆದಿದೆ.
ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ನಿನ್ನೆ ಮಧ್ಯಾಹ್ನ ಕೃಷ್ಣಾ ನದಿಗೆ ಹಾರಿದ್ದಾರೆ ಎನ್ನಲಾಗಿದೆ.
ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾನೆ. ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬಿಜೆಪಿ ಶಾಸಕರ ವಿರುದ್ಧ ಪ್ರತಿಭಟನೆ: ವರದಿ ಮಾಡಿದ ಪತ್ರಕರ್ತ ಸೇರಿ 8 ಮಂದಿಯ ಬಟ್ಟೆ ಬಿಚ್ಚಿಸಿದ ಪೊಲೀಸರು!

ಬಿಸಿಯೂಟ ಸಹಾಯಕರ ಗೌರವಧನ 1 ಸಾವಿರ ರೂ.ಹೆಚ್ಚಳ

ವಿಜಯನಗರದಲ್ಲಿ ಎಸಿ ಸ್ಫೋಟ: ಗಂಡ-ಹೆಂಡತಿ, ಇಬ್ಬರು ಮಕ್ಕಳು ಮಲಗಿದ್ದಲ್ಲೇ ದುರಂತ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
