ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಂಗಳೂರಿನ ಅಬ್ಬಿಗೆರೆಯಲ್ಲಿರುವ ಅವರ ಫಾರ್ಮ್​ಹೌಸ್​ನಲ್ಲಿ ನಿನ್ನೆ (ಜ.28) ಸಂಜೆಯೇ ಅಂತ್ಯಸಂಸ್ಕಾರ ನೆರವೇರಿದೆ.
ಸೌಂದರ್ಯ ಆತ್ಮಹತ್ಯೆ ಕಾರಣ ಪ್ರಸವ ನಂತರದ ಖಿನ್ನತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಇಂಡಿಯಾ ಟುಡೆ ಮಾಧ್ಯಮದ ಜತೆ ಮಾತನಾಡಿದ ಅವರು ಪ್ರಸವದ ನಂತರ ಸೌಂದರ್ಯ ಖಿನ್ನತೆಯ ವಿರುದ್ಧ ಹೋರಾಡುತ್ತಿದ್ದರು. ಇದು ಅವರ ಕುಟುಂಬಕ್ಕೂ ತಿಳಿದಿತ್ತು ಎಂದಿದ್ದಾರೆ.
ಆತ್ಮಹತ್ಯೆಯಲ್ಲಿ ಯಾವುದೇ ಅನುಮಾನವಿಲ್ಲ. ಮಗು ಹುಟ್ಟಿದ ಬಳಿಕ ಆಕೆ ಖಿನ್ನತೆಯಿಂದ ಬಳಲುತ್ತಿದ್ದದ್ದು ನಮಗೆಲ್ಲರಿಗೂ ತಿಳಿದಿದೆ. ಮೊಮ್ಮಗಳನ್ನು ಸಂತೋಷ ಪಡಿಸಲು ಸ್ವತಃ ಯಡಿಯೂರಪ್ಪನವರೇ ಅನೇಕ ಬಾರಿ ತಮ್ಮ ಮನೆಗೆ ಕರೆಸಿಕೊಳ್ಳುತ್ತಿದ್ದರು ಎಂದು ತಿಳಿಸಿದ್ದಾರೆ.
ಮೊಮ್ಮಗಳು ಸೌಂದರ್ಯ ಆತ್ಮಹತ್ಯೆಯಿಂದ ಬಿಎಸ್​ವೈ ತುಂಬಾ ಬೇಸರಗೊಂಡಿದ್ದಾರೆಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಬಿಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ, ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ನಿನ್ನೆ (ಜ.28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು. ಮೂರು ವರ್ಷಗಳ ಹಿಂದೆ ಅಂದರೆ 2018ರಲ್ಲಿ ವೈದ್ಯ ಡಾ.ನೀರಜ್​ ಜತೆ ಮದುವೆ ಆಗಿತ್ತು. ಒಂದು ವರ್ಷದ ಗಂಡು ಮಗು ಕೂಡ ಇವರಿಗಿದೆ.
ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬೌರಿಂಗ್​ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಅಬ್ಬಿಗೆರೆಯಲ್ಲಿರುವ ನೀರಜ್​ ಫಾರ್ಮ್​ ಹೌಸ್​ನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು ಡಾ. ಸೌಂದರ್ಯ ಪಂಚಭೂತಗಳಲ್ಲಿ ಲೀನ

ಬಿಎಸ್​ವೈ ಮೊಮ್ಮಗಳು ಆತ್ಮಹತ್ಯೆ: ಡಾ.ಸೌಂದರ್ಯ ಸಾವಿನ ಮನೆಯ ಕದ ತಟ್ಟಿದ ಆ ಕ್ಷಣ…

ಕಲಾ ಗೋಪಿನಾಥ್ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
