ಹಾಸನ:ತಡರಾತ್ರಿ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಹಾಲಿನ ಟ್ಯಾಂಕರ್​ ಚಾಲಕ ಮಾಡಿದ ತಪ್ಪಿನಿಂದಾಗಿ ಅಪಘಾತ ನಡೆಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ಕೆಎಸ್​ಆರ್​ಟಿಸಿ ಬಸ್​, ಟೆಂಪೋ ಟ್ರಾವೆಲರ್​ ಹಾಗೂ ಹಾಲಿನ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅರಸೀಕೆರೆ ತಾಲೂಕಿನ ಬಾಣವಾರ ಹೋಬಳಿಯಲ್ಲಿರುವ ಅರಸೀಕೆರೆ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ನಾಲ್ವರು ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವಿಗೀಡಾಗಿದ್ದಾರೆ. ಮೃತರನ್ನು ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60) ಹಾಗೂ ಭಾರತಿ (50) ಎಂದು ಗುರುತಿಸಲಾಗಿದೆ.
ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಜಾವಗಲ್​ ಮೂಲದ ಪ್ರಯಾಣಿಕ ಯತೀಶ್​ ಹೇಳುವ ಪ್ರಕಾರ ಹಾಲಿನ ಟ್ಯಾಂಕರ್​ ರಾಂಗ್ ರೂಟ್​ನಲ್ಲಿ ಬಂದಿದ್ದರಿಂದ ಅಪಘಾತ ಸಂಭವಿಸಿದೆ. ಟ್ಯಾಂಕರ್​, ಟಿಟಿ ವಾಹನಕ್ಕೆ ಡಿಕ್ಕಿಯಾಗುತ್ತಿದ್ದಂತೆ ಜಿಗ್-ಜಾಗ್ ರೀತಿಯಲ್ಲಿ ಅಪಘಾತಕ್ಕೀಡಾಯಿತು. ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆಯಿತು. ಟಿಟಿಗೆ ಹಿಂದೆ-ಮುಂದೆ ಎರಡೂ ಭಾಗಕ್ಕೂ ಡಿಕ್ಕಿಯಾದ ಪರಿಣಾಮ ಭೀಕರವಾಗಿ ಅನಾಹುತ ಸಂಭವಿಸಿದೆ. ಬಸ್ಸಿನಲ್ಲಿ ಮುಂದೆ ಕೂತಿದ್ದವರಿಗೂ ಗಾಯಗಳಾಗಿವೆ ಎಂದು ಯತೀಶ್ ಹೇಳಿದರು.
ಪೊಲೀಸ್​ ಮೂಲಗಳ ಪ್ರಕಾರ ಎಡ ಬದಿಯಿಂದ ಬರಬೇಕಿದ್ದ ಹಾಲಿನ ಟ್ಯಾಂಕರ್ ಬಲ ಬದಿಯಿಂದ ಬಂದಿರುವುದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಕಾರಣ ಡಿವಿಯೇಷನ್ ಪಡೆಯದೆ ಹಾಲಿನ ಟ್ಯಾಂಕರ್ ಆಗಮಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಟಿಟಿ ವಾಹನದಲ್ಲಿದ್ದವರು ಅರಸೀಕೆರೆ ತಾಲೂಕಿನ, ಬಾಣವಾರ ಹೋಬಳಿಯ ಹಳ್ಳಿಕೆರೆ ಗ್ರಾಮದವರು. ಧರ್ಮಸ್ಥಳದಿಂದ ಹಾಸನಕ್ಕೆ ತೆರಳಿ, ಅಲ್ಲಿ ಹಾಸನಾಂಬೆಯ ದರ್ಶನ ಪಡೆದು ತಮ್ಮ ಊರಾದ ಹಳ್ಳಿಕೆರೆಗೆ ತೆರಳುತ್ತಿದ್ದರು. ಇನ್ನೇನು ಹಳ್ಳಿಕೆರೆಗೆ ಹೋಗಿ ಮನೆ ಸೇರುವ ತವಕದಲ್ಲಿದ್ದವರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮತ್ತು ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಬಾಣಾವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರಸಿಕೆರೆ ಶಾಸಕ ಶಿವಲಿಂಗೇಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.(ದಿಗ್ವಿಜಯ ನ್ಯೂಸ್​)
ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಐವರು ಮಕ್ಕಳು ಸೇರಿ 9 ಮಂದಿ ಸಾವು, ಊರಿನ ಸಮೀಪವೇ ನಡೆಯಿತು ದುರಂತ

ಬಾಲಿವುಡ್​ನಲ್ಲಿ ಜನರಿಗಿವೆ ಮೂರು ಮುಖಗಳು: ನಟಿ ನರ್ಗಿಸ್ ಫಕ್ರಿ

ರಿಷಭ್​ಗೆ ಡಬಲ್ ಸಂಭ್ರಮ!; ಶಿವಮ್ಮ ಚಿತ್ರಕ್ಕೆ ಬೂಸಾನ್ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 10 =
Remember me
