ಹಾಸನ:ಬೈಕ್​ನಲ್ಲಿ ಬಂದು ಸರಗಳ್ಳತನ ಮಾಡುತ್ತಿದ್ದ ಬಂಧಿತ ಖದೀಮನೊಬ್ಬನ ಹಿನ್ನೆಲೆ ತಿಳಿದು ಪೊಲೀಸರೇ ಅಚ್ಚರಿಗೆ ಒಳಗಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಎಂ.ಕೆ. ಅಭಿಷೇಕ್ ಬಂಧಿತ ಖದೀಮ. ಈತ ಮೂಲತಃ ಮೈಸೂರು ಜಿಲ್ಲೆಯ ಸಾಲಿಗ್ರಾಮ ಹೋಬಳಿಯ ಮುಂಡೂರು ಗ್ರಾಮದ ನಿವಾಸಿ.

ಕಳೆದ ಆಗಸ್ಟ್ 6 ರಂದು ಹೊಳೆನರಸೀಪುರದಲ್ಲಿ ನಡೆದಿದ್ದ ಸರಗಳ್ಳತನ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ದೂರು ಸ್ವೀಕರಿಸಿದ ಹಾಸನ ಪೊಲೀಸರು ತನಿಖೆ ಆರಂಭಿಸಿ ಆರೋಪಿ ಅಭಿಷೇಕ್​ನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆತನ ಹಿನ್ನೆಲೆಯನ್ನು ಕೇಳಿ ಪೊಲೀಸರೇ ದಂಗಾಗಿದ್ದಾರೆ.
ಅಭಿಷೇಕ್​ ಓರ್ವ ಎಂ ಕಾಮ್​ ಪದವೀಧರ. ಈತ ಹೊಳೆನರಸೀಪುರ ಭಾರತ್ ಫೈನಾನ್ಸ್​ನಲ್ಲಿ ಅಸಿಸ್ಟೆಂಟ್ ಫೀಲ್ಟ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ ಮತ್ತು ತಿಂಗಳಿಗೆ 35 ಸಾವಿರ ರೂಪಾಯಿ ಸಂಬಳ ಪಡೆಯುತ್ತಿದ್ದ.

ಅಷ್ಟು ಸಂಬಳ ಪಡೆದರು ಆತ ಆನ್​ಲೈನ್ ರಮ್ಮಿ ಚಟ ಅಂಟಿಸಿಕೊಂಡಿದ್ದ. ಆನ್​ಲೈನ್​ ಜೂಜಾಡಿ ಸಾಕಷ್ಟು ಹಣ ಕಳೆದುಕೊಂಡಿದ್ದ. ಕೊನೆಗೆ ಹಣಕ್ಕಾಗಿ ಸರಗಳ್ಳತನಕ್ಕೆ ಇಳಿದಿದ್ದ. ಗಮನಾರ್ಹವೆಂದರೆ, ಕೇವಲ ಭಾನುವಾರ ಮಾತ್ರ ಸರಗಳ್ಳತನಕ್ಕೆ ಇಳಿಯುತ್ತಿದ್ದ. ಇದೀಗ ಅಭಿಷೇಕ್​ನನ್ನು ಬಂಧಿಸಲಾಗಿದ್ದು, ಆತನಿಂದ ಒಟ್ಟು ಆರೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರಗಳನ್ನು ವಶಕ್ಕೆ ಪಡೆಯಲಾಗಿದೆ.
ಅಭಿಷೇಕ್​ ಒಟ್ಟು ಏಳು ಪ್ರಕರಣದಲ್ಲಿ ಭಾಗಿಯಾಗಿದ್ದ. ಹಾಸನ ಗೊರೂರು ಠಾಣೆ, ಹೊಳೆನರಸೀಪುರ, ಅರಕಲಗೂಡು ಕೊಣನೂರು, ಅರಸೀಕೆರೆ ದುದ್ದ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಅಭಿಷೇಕ್​ ವಿಚಾರಣೆ ನಡೆಯುತ್ತಿದೆ. ಅಲ್ಲದೆ, ತನಿಖೆಯು ಸಹ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಮುಂಬೈನಲ್ಲಿ ಖರೀದಿಸಿರುವ ಐಷಾರಾಮಿ ಅಪಾರ್ಟ್​ಮೆಂಟ್​ ಬೆಲೆ ಕೇಳಿದ್ರೆ ಬೆರಗಾಗ್ತೀರಾ!

PHOTOS| ಟೂ ಪೀಸ್​ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಹಾಟ್​ ಬ್ಯೂಟಿ ಇಲಿಯಾನಾ!

ಜಮ್ಮು ಕಾಶ್ಮೀರದ ಕಾರಾಗೃಹ ಡಿಜಿಪಿ ಭೀಕರ ಕೊಲೆ: ಹತ್ಯೆಯ ಹೊಣೆ ಹೊತ್ತ PAFF ನಿಂದ ಕೇಂದ್ರ ಸರ್ಕಾರಕ್ಕೆ ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
