ಬೆಂಗಳೂರು:ಮಹಾಮಾರಿ ಕರೊನಾ ವೈರಸ್​ ಬಿಕ್ಕಟ್ಟಿನ ಸಂದರ್ಭದಲ್ಲಿ ಹಲವು ಸಮಸ್ಯೆಗಳು ರಾಜ್ಯದ ಎದುರಿಗಿದ್ದು, ಇದರ ನಡುವೆ ರಾಜಕೀಯದಲ್ಲಿ ಕೇಳಿಬರುತ್ತಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಸರ್ಕಾರದ ನಡೆ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಎಚ್​ಡಿಕೆ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿರುವ ಸಾರಾಂಶ ಈ ಕೆಳಕಂಡಂತಿದೆ.
ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಅದು ಎಂಥಾ ಸಂದರ್ಭದಲ್ಲಿ? ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ಧಕ್ಕೆಯಾಗಿರುವ ಕಾಲಘಟ್ಟದಲ್ಲಿ.
ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಇಂಥ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ?
ರಾಜ್ಯ ಸರ್ಕಾರ ಕೋವಿಡ್‌ ಸ್ಥಿತಿಯನ್ನು ನಿಭಾಯಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸರ್ಕಾರ ಇನ್ನಾದರೂ ತಿದ್ದಿಕೊಳ್ಳಲಿದೆ ಎಂದು ನಾವು ಭಾವಿಸಿದೆವು. ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಟೀಕಿಸಿ ರಾಜಕೀಯ ಮಾಡುವುದು ಬೇಡ ಎಂದು ಜೆಡಿಎಸ್‌ ನಿರ್ಧರಿಸಿತ್ತು. ಆದರೆ, ಬಿಜೆಪಿ ಅಧಿಕಾರದ ಲಾಲಸೆ ಪ್ರದರ್ಶಿಸಿದರೆ ಸುಮ್ಮನಿರುವುದು ಹೇಗೆ?
ಬಿಎಸ್‌ ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ‘ ಮುಂತಾದವರನ್ನು ಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ.
ಇನ್ನೊಂದೆಡೆ, ‘ಅನ್ನ ಹಳಸಿದೆ, *** ಕಾದಿದೆ‘ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ.
ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆ ಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು. ಸಂಕಷ್ಟದ ಪರಿಸ್ಥಿತಿಯನ್ನೇ ಅಧಿಕಾರಕ್ಕೇರಲು ಏಣಿ ಮಾಡಿಕೊಳ್ಳುತ್ತಿರುವ ಈ ಪಕ್ಷಗಳ ನಡೆಯನ್ನು ಜನ ಗಮನಿಸಬೇಕು.
ಆರೋಗ್ಯ ತುರ್ತು ಪರಿಸ್ಥಿತಿಯ ನಡುವೆ ಕನ್ನಡ, ಕರ್ನಾಟಕದ ಅಸ್ಮಿತೆ ಪ್ರಶ್ನೆ ಮಾಡುವಂಥ ಘಟನೆಗಳು ಒಂದರ ಹಿಂದೊಂದರಂತೆ ನಡೆದವು. ಈ ವಿಚಾರವಾಗಿ ಬಿಜೆಪಿ, ಕಾಂಗ್ರೆಸ್‌ ಏನು ಮಾಡಿದವು? ಇವರೆಲ್ಲ ರಾಜಕೀಯ ಮಾಡುತ್ತಿರುವುದು ಕರ್ನಾಟಕದಲ್ಲೇ ಅಲ್ಲವೇ? ಆದರೆ, ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಇವರೆಲ್ಲ ಅದ್ಯಾವ ಬಿಲದಲ್ಲಿ ಅಡಗಿದ್ದರು?
ಹೀಗೆ ಸಾಲು ಸಾಲು ಪ್ರಶ್ನೆಗಳ ಮೂಲಕ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರು ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್​ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
VIDEO| ಕರ್ತವ್ಯದ ನಡುವೆಯೇ ಡುಯೆಟ್​ ಸಾಂಗ್​! ಪೊಲೀಸ್​ ಸಿಬ್ಬಂದಿಗೆ ಎದುರಾಯ್ತು ಸಂಕಷ್ಟ

ಹೋಟೆಲ್​ನಲ್ಲಿ ಪರೋಟ ಮಾಡುವ ಕಾಯಕ: LLB ವಿದ್ಯಾರ್ಥಿನಿಯ ಲೈಫ್​ ಸ್ಟೋರಿಗೆ ಫಿದಾ ಆಗೋದು ಗ್ಯಾರೆಂಟಿ!

ಸ್ನೇಹಿತರಿಂದ ಹೆಂಡತಿಯನ್ನೇ ರೇಪ್​ ಮಾಡಿಸಿದ ಗಂಡ! ಸಾಲದ ಬದಲು ಸೆಕ್ಸ್​ ಎಂದ ಪಾಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + thirteen =
Remember me
