ಬೆಂಗಳೂರು:ಸಾಲು ಸಾಲು ಹಬ್ಬಗಳ ಹೊಸ್ತಿಲಿಲ್ಲೇ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
#ನವರಾತ್ರಿಗೆ_ಕರೆಂಟ್_ಶಾಕ್ ಎಂಬ ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಇಂಧನ ಹೊಂದಾಣಿಕೆ ಶುಲ್ಕದ ನೆಪದಲ್ಲಿ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್‌ ದರ ಏರಿಸಿದೆ. ಕಳೆದ ಜುಲೈನಲ್ಲಿ ಬರೆ ಎಳೆದಿತ್ತು. ಈಗ ಮತ್ತೆ ದರ ಹೆಚ್ಚಿಸಿದೆ. ಕಲ್ಲಿದ್ದಲು ಬೆಲೆ ಹೆಚ್ಚಳದಿಂದ ವಿದ್ಯುತ್‌ ದರವನ್ನೂ ಏರಿಸಲಾಗುತ್ತಿದೆ ಎಂದು ಇಂಧನ ಸಚಿವರು ಹೇಳುವ ಮಾತು ಒಪ್ಪುವ ರೀತಿ ಇಲ್ಲ.
ವಿಧಾನಮಂಡಲ ಅಧಿವೇಶನ ಮುಂದೂಡಿಕೆಯಾದ ಕೂಡಲೇ ವಿದ್ಯುತ್‌ ದರ ಏರಿಕೆ ಆಗಿದೆ! ಏನೀ ಹುನ್ನಾರ? ನವರಾತ್ರಿಗೆ ಹಬ್ಬದ ಶುಭಾಶಯ ಹೇಳಬೇಕಿದ್ದ ಸರಕಾರ, ಕರೆಂಟ್‌ ಶಾಕ್ ಕೊಟ್ಟು ಜನರು ಕಂಗೆಡುವಂತೆ ಮಾಡಿದೆ.‌ ಪ್ರತಿ ಯೂನಿಟ್​ಗೆ 24ರಿಂದ 43 ಪೈಸೆ ಹೆಚ್ಚಿಸಿರುವುದು ಅವೈಜ್ಞಾನಿಕ, ಅನಪೇಕ್ಷಿತ ಮತ್ತು ಖಂಡನೀಯ.
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳು ತುಂಬಿವೆ. ವಿದ್ಯುತ್‌ ಉತ್ಪಾದನೆ ಉತ್ತಮವಾಗಿದೆ. ಆದರೂ ಖರೀದಿ ವೆಚ್ಚದಲ್ಲಿ 1,244 ಕೋಟಿ ರೂ. ಹೆಚ್ಚಳ ಆಗಿದೆ ಎನ್ನುವ ಲೆಕ್ಕವನ್ನು ನಂಬುವ ರೀತಿಯಲ್ಲಿ ಇಲ್ಲ. ಇಂಧನ ವಲಯದ ಕೆಲ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಎಸ್ಕಾಂಗಳ ಭುಜದ ಮೇಲೆ ಗುಂಡಿಟ್ಟು, ಜನರಿಗೆ ಹೊಡೆಯುವ ಕೆಲಸ ಆಗುತ್ತಿದೆ.
ರಾಜ್ಯ ಬಿಜೆಪಿ ಸರ್ಕಾರ ಜನರ ಪರ ಇಲ್ಲ ಎನ್ನುವುದು ಸತ್ಯ. ಜಾಗತಿಕ ಪೇಟೆಯಲ್ಲಿ ಕಚ್ಛಾತೈಲದ ಬೆಲೆ ನಿರಂತರ ಇಳಿದರೂ ದೇಶದಲ್ಲಿ ತೈಲಬೆಲೆ ಇಳಿಸದ ಕೇಂದ್ರದ ಬಿಜೆಪಿ ಸರ್ಕಾರದ ಹಾದಿಯಲ್ಲೇ ರಾಜ್ಯ ಬಿಜೆಪಿ ಸರ್ಕಾರವು ಸಾಗಿದೆ. ವಿದ್ಯುತ್‌ ದರದ ನಿರಂತರ ಏರಿಕೆ ಬಗ್ಗೆ ಗಂಭೀರ ಅನುಮಾನಗಳಿವೆ. ವಿದ್ಯುತ್‌ ಸೋರಿಕೆ, ಕಳವು ತಡೆಲಾಗದ, ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳದ ಬಿಜೆಪಿ ಸರ್ಕಾರ, ಅದಕ್ಷತೆಯ ಆಡಂಬೋಲ. “ಬಡವರನ್ನು ಸುಲಿದು ಬಿಸ್ನೆಸ್‌ ಕ್ಲಾಸಿನ ಜನರ ಜೇಬು ತುಂಬು” ಎನ್ನುವುದು ಬಿಜೆಪಿ ತತ್ತ್ವ. ಅದನ್ನೇ ಕರ್ನಾಟಕದಲ್ಲೂ ಎಗ್ಗಿಲ್ಲದೆ ಮಾಡುತ್ತಿದೆ.
ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ; ಪ್ರತಿ ಯುನಿಟ್​ಗೆ ಎಷ್ಟು ಹೆಚ್ಚಳ?; ಇಲ್ಲಿದೆ ಮಾಹಿತಿ..

VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​

ದುಡ್ಡು ಕೊಟ್ಟರೆ ನಮ್ಮ ಸಾಹೇಬರು ಗಾಡಿ ಹಿಡಿಯೋದಿಲ್ಲ! ಲೋಕಾ ದಾಳಿ ಬಳಿಕ ಪೇದೆಗಳಿಬ್ಬರ ಆಡಿಯೋ ವೈರಲ್​

PHOTOS| ಮಾಲ್ಡೀವ್ಸ್​ ಕಡಲ ಕಿನಾರೆಯಲ್ಲಿ ಹಾಟ್​ ಬ್ಯೂಟಿ ಅಮಲಾರ ಬೋಲ್ಡ್​ ಅವತಾರಗಳು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − 8 =
Remember me
