ಬೆಂಗಳೂರು:ಮೇಕೆದಾಟು ಯೋಜನೆಯನ್ನು ‘ವಿವಾದ’ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ʼಬಿಕ್ಕಟ್ಟಿನ ಲೇಪನʼ ಹಚ್ಚಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಹೇಳಿದ್ದಾರೆ. ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ʼಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆʼಎಂದು ಟೀಕಿಸಿದ್ದಾರೆ.
ಮುಂಗಡ ಪತ್ರದಲ್ಲಿ ಯೋಜನೆಗೆ 1,000 ಕೋಟಿ ರೂ. ಕೊಟ್ಟೆವು ಎಂದು ಬಿಜೆಪಿ ಹಾಗೂ ನಮ್ಮ ಪಾದಯಾತ್ರೆಯಿಂದಲೇ ಹಣ ಘೋಷಿಸಲಾಯಿತು ಎಂದು ಕಾಂಗ್ರೆಸ್‌ ಕುಣಿಯುತ್ತಿವೆ. ಒಂದೇ ನಾಣ್ಯದ ಎರಡು ಮುಖಗಳಾದ ಎರಡೂ ರಾಷ್ಟ್ರೀಯ ಪಕ್ಷಗಳು, ಈಗ ಮೇಕೆದಾಟು ಇಟ್ಟುಕೊಟ್ಟುಕೊಂಡು ‘ಚುನಾವಣಾ ಆಟ’ ಶುರು ಮಾಡಿವೆ ಎಂದು ವ್ಯಂಗ್ಯವಾಡಿದ್ದಾರೆ.
ವಾಸ್ತವ ಏನು ಎಂಬುದನ್ನು ನಾನು ಬಹಳ ಹಿಂದೆಯೇ ಹೇಳಿದ್ದೆ. ಕೇಂದ್ರದ ಕಾನೂನು ಸುಳಿಯಲ್ಲಿ ಸಿಕ್ಕಿರುವ ಹಾಗೂ ಕೇಂದ್ರದ ಜಲ ಆಯೋಗದಲ್ಲಿ ಕೊಳೆಯುತ್ತಿರುವ ಮೇಕೆದಾಟು ಯೋಜನೆಯು ಪಾದಯಾತ್ರೆಯಿಂದ ಬರುವುದಿಲ್ಲ. ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕಿಯೇ ತಂದುಕೊಳ್ಳಬೇಕು ಎಂದಿದ್ದೆ ಎಂದು ಹೇಳಿದ್ದಾರೆ.
ಈಗ ಕೇಂದ್ರ ಸಚಿವರಾದ ಶೇಖಾವತ್‌ ಅವರು, “ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಕರ್ನಾಟಕ ಉಂಟು, ತಮಿಳುನಾಡು ಉಂಟು. ನೀವು ನೀವೇ ಮಾತನಾಡಿಕೊಳ್ಳಿ” ಎಂದು ಕೈ ಎತ್ತಿಬಿಟ್ಟಿದ್ದಾರೆ. ಹಾಗಾದರೆ, ಯೋಜನೆಗೆ ಒಪ್ಪಿಗೆ ನೀಡುವಲ್ಲಿ ಕೇಂದ್ರ ಸರಕಾರದ ಪಾತ್ರವೇ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಪಾಲಿನ ನೀರನ್ನು ದಕ್ಕಿಸಿಕೊಳ್ಳುವುದು ಮತ್ತು ನಮ್ಮ ಜನರಿಗೆ ಕುಡಿಯುವ ನೀರು ಕೊಡುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡುವುದು ಕರ್ನಾಟಕದ ಹಕ್ಕು. ಆದರೆ, ಕೇಂದ್ರ ಸಚಿವರು ‘ನೀವೇ ಬಗೆಹರಿಸಿಕೊಳ್ಳ’ ಎಂದು ಹೇಳಿದ ಒಳಮರ್ಮವೇನು? ಕಾವೇರಿ ಬಗ್ಗೆ ಬಿಜೆಪಿ ‘ಹೊಸ ವರಸ’ ಶುರು ಮಾಡಿತೇ ಎನ್ನುವ ಸಂಶಯವನ್ನು ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.
1,000 ಕೋಟಿ ಹಣ ಘೋಷಣೆ ಮಾಡಿದೊಡನೆ ಪಾದಯಾತ್ರೆಯಿಂದಲೇ ಆಯಿತು ಎಂದು ‘ಹಿಗ್ಗಿ ಹೀರೆಕಾಯ’ ಆಗಿದ್ದ ಕಾಂಗ್ರೆಸ್‌ ನಿಲುವೇನು? ಅವರೀಗ ತಮ್ಮ ಮಿತ್ರಪಕ್ಷ ಡಿಎಂಕೆ ಅಧಿಕಾರದಲ್ಲಿರುವ ತಮಿಳುನಾಡು ಸರಕಾರದ ಜತೆ ಮಾತುಕತೆ ನಡೆಸಿ ಎಂದು ಕೇಂದ್ರ ಸರಕಾರದ ಮೇಲೆ ಒತ್ತಡ ಹಾಕುತ್ತಾರಾ? ಎಂದು ಕುಮಾರಸ್ವಾಮಿ ಕೇಳಿದ್ದಾರೆ.
ತನ್ನ ಕಾರು ಅಪಘಾತಕ್ಕೀಡಾದ ಬಗ್ಗೆಯೇ ಹೊಸ ಹಾಡು ರಚಿಸಿ ಧ್ವನಿ ನೀಡಿದ ಕಚ್ಚಾ ಬಾದಾಮ್​ ಗಾಯಕ!

ದುಬೈನಲ್ಲಿ ಕೇರಳದ ಸೋಶಿಯಲ್​ ಮೀಡಿಯಾ ಸ್ಟಾರ್​ ಸಾವು: ಗಂಡನ ಮೇಲಿನ ಸಂಶಯಕ್ಕೆ ಕಾರಣ ಹೀಗಿದೆ… ​

ಬಸವಣ್ಣನಿಗೆ ಹಾಲು ಕುಡಿಸಲು ಹರಿದುಬಂದ ಭಕ್ತರ ದಂಡು: ದೇವಸ್ಥಾನದ ಬಾಗಿಲನ್ನೇ ಮುಚ್ಚಿಸಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
