ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಭಾನುವಾರ (ಮೇ 8) ಮಧ್ಯಾಹ್ನ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ.
ಇದರ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ ನಾಲ್ಕೈದು ದಿನ ಇನ್ನಷ್ಟು ಚುರುಕಾಗಲಿದೆ. ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಆ ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಬೆಂಗಳೂರು, ಬೆಂ. ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ, ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ೋಷಿಸಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಧಾರಾಕಾರವಾಗಿ ಮಳೆ ಬೀಳಲಿದೆ.
ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ಮಾತನಾಡಿ, ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ಒಂದೆರೆಡು ದಿನಗಳಲ್ಲಿ ಚಂಡಮಾರುತವಾಗಿ ಸೃಷ್ಟಿಯಾಗಲಿದ್ದು, ಓರಿಸ್ಸಾದತ್ತ ಮಾರುತಗಳು ಚಲಿಸಲಿವೆ. ಹವಾಮಾನ ಇಲಾಖೆ ಸೈಕ್ಲೋನ್‌ಗೆ ಇನ್ನೂ ಹೆಸರು ಕೊಟ್ಟಿಲ್ಲ. ಇದರಿಂದ ನಮ್ಮ ರಾಜ್ಯಕ್ಕೆ ಅಷ್ಟೇನೂ ಪರಿಣಾಮ ಇಲ್ಲದಿದ್ದರೂ ಭರ್ಜರಿ ಮಳೆಯಾಗಲಿದೆ ಎಂದರು.
ಫ್ರೆಂಡ್​ ಆಯೋಜಿಸಿದ್ದ ಪಾರ್ಟಿಯಲ್ಲಿ ಬಿರಿಯಾನಿ ಜತೆ 1.45 ಲಕ್ಷ ರೂ. ಮೌಲ್ಯದ ಆಭರಣ ನುಂಗಿದ ವ್ಯಕ್ತಿ!

ಬಟ್ಟೆ ಬದಲಾಯಿಸಲು ಈಜುಕೊಳದ ಡ್ರಸ್ಸಿಂಗ್​ ರೂಮ್​ ಒಳಗೆ ಹೋದ ಯುವತಿಗೆ ಕಾದಿತ್ತು ಬಿಗ್​ ಶಾಕ್​!

‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × one =
Remember me
