ಹುಬ್ಬಳ್ಳಿ:ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, 7 ಮಂದಿ ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಅಪಘಾತವು ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ನಡೆದಿದೆ. ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್​ನಲ್ಲಿದ್ದ ಐವರು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ. 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ನ್ಯಾಷನಲ್ ಟ್ರಾವೆಲ್ಸ್​ನ KA 51 AA 7146 ನಂಬರ್ ಬಸ್ ಹಾಗೂ MH 16 AY 6916 ಲಾರಿ ಮಧ್ಯೆ ಅಪಘಾತ ನಡೆದಿದೆ. 25ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಮದುವೆ ಆಗದೆಯೇ ಸೆಟಲ್ ಆಗಿದ್ದೀನಿ!; ಕಿಯಾರಾ ಅಡ್ವಾನಿ ಖಡಕ್ ಉತ್ತರ

25 ಕೆಜಿ ತೂಕ ಹೆಚ್ಚಿಸಿಕೊಂಡ ರಕ್ಷಿತ್ ಶೆಟ್ಟಿ; ಸಪ್ತಸಾಗರದಾಚೆ ಎಲ್ಲೋಗಾಗಿ ಕಸರತ್ತು

ಕೋವಿಡ್ ಬಳಿಕ 30 ತಾಸಿಗೊಬ್ಬ ಹೊಸ ಶತಕೋಟ್ಯಧೀಶ: ಪ್ರತಿ 33 ಗಂಟೆಗೆ 10 ಲಕ್ಷ ಜನರು ಕಡುಬಡತನಕ್ಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + three =
Remember me
