ಚಾಮರಾಜನಗರ/ಮೈಸೂರು:ಕಾಂಗ್ರೆಸ್​ ನಡೆಸುತ್ತಿರುವ ಭಾರತ್​ ಜೋಡೋ ಪಾದಯಾತ್ರೆ ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೆಳ್ಳಂಬೆಳಗ್ಗೆ ಮಳೆರಾಯನ ಆಗಮನದಿಂದಾಗಿ ಪಾದಯಾತ್ರೆ ತಡವಾಗಿ ಆರಂಭವಾಗಿದ್ದು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೊಂಡವಾಡಿ ಗ್ರಾಮದಿಂದ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಎರಡನೇ ದಿನದ ಪಾದಯಾತ್ರೆ ಆರಂಭವಾಗಿದೆ.
ಜೋಡೋ ಯಾತ್ರೆ ನಿನ್ನೆ ಕೇರಳದಿಂದ ಕರ್ನಾಟಕವನ್ನು ಪ್ರವೇಶಿಸಿತು. ರಾಹುಲ್​ ಗಾಂಧಿ ರಾತ್ರಿ ಬೇಗೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿಂದತೆ ಸಾಕಷ್ಟು ಕೈ ನಾಯಕರು ರಾಹುಲ್​ಗೆ ಪಾದಯಾತ್ರೆ ಸಮಯದಲ್ಲಿ ಸಾಥ್ ನೀಡಿದರು.
ಇಂದು ಚಾಮರಾಜನಗರ ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಪಾದಯಾತ್ರೆ ಎಂಟ್ರಿಯಾಗಿದೆ. ಪಾದಯಾತ್ರೆ ಮೈಸೂರು ಜಿಲ್ಲೆಯ ಗಡಿ ಪ್ರವೇಶಿಸುತ್ತಿದ್ದಂತೆ ನೆರೆದಿದ್ದ ಸಹಸ್ರಾರು ಮಂದಿ ಅದ್ಧೂರಿ ಸ್ವಾಗತ ಕೋರಿದರು. ವಿವಿಧ ಕಲಾ ತಂಡಗಳು ಪಾದಯಾತ್ರೆಯ ಮೆರುಗು ಹೆಚ್ಚಿಸಿದ್ದವು. ಪಾದಯಾತ್ರೆ ನಡುವೆ ನಂಜನಗೂಡು ತಾಲೂಕಿನ ಕಳಲೆ ಗೇಟ್ ಬಳಿ ನಾಯಕರು ವಿಶ್ರಾಂತಿ ಪಡೆಯಲಿದ್ದಾರೆ. ಮತ್ತೆ ಸಂಜೆ 4 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ರಾತ್ರಿ 7 ಗಂಟೆಗೆ ನಂಜನಗೂಡು ತಾಲೂಕಿನ ತಾಂಡವಪುರದಲ್ಲಿ ಇಂದಿನ ಪಾದಯಾತ್ರೆ ಮುಕ್ತಾಯವಾಗಲಿದೆ.
ಪಾದಯಾತ್ರೆಯಲ್ಲೂ ಎರಡು ಬಣಡಿ.ಕೆ. ಶಿವಕುಮಾರ್​ ಜತೆ ಹೆಜ್ಜೆ ಕೆಪಿಸಿಸಿ ಕಾರ್ಯಾಧ್ಯಕ್ಣ ಧೃವನಾರಾಯಣ್ ಹೆಜ್ಜೆ ಹಾಕಿದರೆ, ಮಾಜಿ ಸಿಎಂ ಸಿದ್ದರಾಮಯ್ಯನವರ ಜೊತೆ ಶಾಸಕ ಯತೀಂದ್ರ ಸಿದ್ದರಾಮಯ್ಯ, ಡಾ.ಎಚ್.ಸಿ ಮಹದೇವಪ್ಪ ಹೆಜ್ಜೆ ಹಾಕಿದರು. ಪಾದಯಾತ್ರೆ ವೇಳೆ ಡಿಕೆಶಿ ಜೊತೆ ರಾಹುಲ್ ಮಾತುಕತೆ ನಡೆಸುತ್ತಿದ್ದು, ಸಿದ್ದರಾಮಯ್ಯನವರು ಅಂತರ ಕಾಯ್ದುಕೊಂಡ ಪಾದಯಾತ್ರೆ ನಡೆಸುತ್ತಿದ್ದಾರೆ.
ಕೇಜ್ರಿವಾಲ್​ರನ್ನು ಮನೆಗೆ ಆಹ್ವಾನಿಸಿ ಆತಿಥ್ಯ ನೀಡಿದ್ದ ಗುಜರಾತಿನ ಆಟೋ ಚಾಲಕ ಎರಡೇ ವಾರದಲ್ಲಿ ಯೂಟರ್ನ್! ​

2 ವಾರಗಳ ಹಿಂದಷ್ಟೇ ಬಿಡುಗಡೆಯಾದ ಸಿನಿಮಾದಲ್ಲಿ ನಟಿಸಿದ್ದ ಯುವ ನಟಿಯ ಶವ ಹೋಟೆಲ್ ರೂಮ್​ನಲ್ಲಿ ಪತ್ತೆ!​

https://www.vijayavani.net/r-tumkur-pradeep-pavagada-manju-pavagada-tumkur-corporation-blackmail/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 6 =
Remember me
