ಉಡುಪಿ:ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಉಡುಪಿ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಲಂ 306ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್, ರಮೇಶ್ ಮತ್ತಿತರರ ಮೇಲೆ ಪ್ರಕರಣ ದಾಖಲಾಗಿದೆ. ತಡರಾತ್ರಿ 2.20ರ ಸುಮಾರಿಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ ಪಾಟೀಲ್ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಸಿರುವ ಪ್ರಶಾಂತ ಪಾಟೀಲ್, ಸಹೋದರ ಸಂತೋಷ್​ ಪಾಟೀಲ್​ ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಮಾಡಿದ್ದ. 4 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಚರಂಡಿ ಫೇವರ್ಸ್ ಜೋಡಣೆ ಕಾಮಗಾರಿ ಮಾಡಿಸಿದ್ದ. ಈ ಹಣವನ್ನು ಬಿಡುಗಡೆ ಮಾಡಲು ಸಚಿವ ಈಶ್ವರಪ್ಪ ಶೇ. 40 ಕಮಿಷನ್​ಗೆ ಬೇಡಿಕೆ ಇಟ್ಟಿದ್ದರು ಎಂದು ದೂರಿಲ್ಲಿ ಉಲ್ಲೇಖಿಸಿದ್ದಾರೆ.
ಅಲ್ಲದೆ, ಕಮಿಷನ್​ ಬಗ್ಗೆ ಪತ್ನಿ ಜಯಾ ಮತ್ತು ನನ್ನ ಬಳಿ ತಿಳಿಸಿದ್ದ. ಅಲ್ಲದೆ, ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ತನ್ನ ಜೀವಕ್ಕೇನಾದರೂ ಅಪಾಯವಾದರೆ ನೀವೇ ಕಾರಣ ಎಂದು ಈಶ್ವರಪ್ಪ ವಿರುದ್ಧ ಸಂತೋಷ್​ ಹೇಳಿದ್ದ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಮನವಿ ನೀಡಿದ್ದ. ಆದರೆ, ಯಾವುದಕ್ಕೂ ಸ್ಪಂದನೆ ಸಿಗದೆ ಮತ್ತು ಹಣ ಬಿಡುಗಡೆಯಾಗದೇ ಮನನೊಂದಿದ್ದ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರಶಾಂತ್​ ಪಾಟೀಲ್​ ದೂರಿನಲ್ಲಿ ತಿಳಿಸಿದ್ದಾರೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ A1 ಆರೋಪಿಯಾಗಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಮುಂದೇನಾಗುತ್ತದೆ ಎಂದು ಕಾದು ನೋಡಬೇಕಿದೆ.
ಆಗಿದ್ದೇನು?ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್​ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ನೋಟ್​ ಬರೆದಿಟ್ಟು ನಿನ್ನೆ (ಏ.12) ಉಡುಪಿಯ ಲಾಡ್ಜ್​ವೊಂದರಲ್ಲಿ ಆತ್ಮಹತ್ಮೆಗೆ ಶರಣಾಗಿದ್ದಾರೆ. ಈ ಘಟನೆ ರಾಜ್ಯ ರಾಜಕಾರಣದಲ್ಲಿ ಬಿಡುಗಾಳಿ ಎಬ್ಬಿಸಿದೆ.(ದಿಗ್ವಿಜಯ ನ್ಯೂಸ್​)
ಈಶ್ವರಪ್ಪ ವಿರುದ್ಧ ಕಮಿಷನ್​ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ! ಸಾವಿಗೂ ಮುನ್ನ ಡೆತ್​ನೋಟ್​ ರವಾನೆ

ಸಂತೋಷ್​ ಆತ್ಮಹತ್ಯೆಗೂ ನನ್ಗೂ ಯಾವ್ದೇ ಸಂಬಂಧವಿಲ್ಲ… ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ಮೊಬೈಲ್​ಫೋನ್​ ಸಂದೇಶವೂ ಡೆತ್​ನೋಟ್!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × two =
Remember me
