ಕಲಬುರಗಿ:ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋಗುವಾಗ ಕುಸಿದು ಬಿದ್ದ ಯುವಕನೊಬ್ಬ ಸಾವಿಗೀಡಾಗಿರುವ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಕೊಂಡಾ (20) ಮೃತ ಯುವಕ. ಮಂಗಳವಾರ (ಆ.30) ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾದಲ್ಲಿ 10 ರಿಂದ 15 ಜನರ ತಂಡ ಇಸ್ಪಿಟ್​ ಆಡುತ್ತಿದ್ದಾಗ ಪೊಲೀಸರು ದಿಢೀರ್​ ದಾಳಿ ಮಾಡಿದರು. ಈ ವೇಳೆ ಗಾಬರಿಗೊಂಡ ತಂಡ ಪೊಲೀಸರಿಗೆ ಹೆದರಿ ಚೆಲ್ಲಾಪಿಲ್ಲಿಯಾಗಿ ಓಡುವಾಗ ಸಿದ್ದಪ್ಪ ಕೊಂಡ ಕುಸಿದುಬಿದ್ದು ಮೃತಪಟ್ಟಿದ್ದಾನೆ.
ಗ್ರಾಮಸ್ಥರ ಪ್ರತಿಭಟನೆಸಿದ್ದಪ್ಪಾ ಕೊಂಡ ಸಾವಗೀಡಾದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಲಬುರಗಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸುತ್ತಿದ್ದಾರೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಕುತೂಹಲಕ್ಕೆ ತೆರೆ ಎಳೆದ ನಟಿ ರಮ್ಯಾ: ಮತ್ತೆ ಸಿನಿಮಾಗೆ ಎಂಟ್ರಿ ಕೊಟ್ಟ ಮೋಹಕ ತಾರೆ, ಆದ್ರೆ ನಟಿಯಾಗಿ ಅಲ್ಲ

ಕೆಲವೇ ದಿನಗಳಲ್ಲಿ ಮದ್ವೆ ಆಗಬೇಕಿದ್ದ ಯುವತಿ ದುರಂತ ಸಾವು: ಭಾವಿ ಪತಿಯ ಬಂಧನ, ಮೊಬೈಲ್​ನಲ್ಲಿತ್ತು ಸಾವಿನ ರಹಸ್ಯ

ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ್ರೂ ಮಂಡ್ಯಕ್ಕೆ ಬಾರದ ಸಂಸದೆ ಸುಮಲತಾ ವಿರುದ್ಧ ಜನಾಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − three =
Remember me
