ಕೊಪ್ಪಳ:ಕಡಿಮೆ ದರಕ್ಕೆ ಚಿನ್ನ ಕೊಡುವುದಾಗಿ ನಂಬಿಸಿ ಹಣ ದೋಚುವ ಖತರ್ನಾಕ್​ ಗ್ಯಾಂಗ್​ ಅನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ತಾಲೂಕಿನ ಅಳವಂಡಿ ಪೊಲೀಸರು ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಡಿಪಾಯ ತೆಗೆಯುವಾಗ ಚಿನ್ನ ಸಿಕ್ಕಿದೆ. ಅದನ್ನು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದೇವೆ ಎಂದು ನಂಬಿಸಿ ಆರೋಪಿಗಳು ವಂಚನೆ ಮಾಡುತ್ತಿದ್ದರು.
ಯಲಬುರ್ಗಾ ತಾಲೂಕಿನ ವಣಗೇರಿಯ ವೆಂಕಟೇಶ ಎಂಬುವರನ್ನ ನಂಬಿಸಿ 5 ಲಕ್ಷ ಹಣ ದೋಚಿದ್ದರು. ನನ್ನ ಹೆಸರು ರಮೇಶ. ಚಿಕ್ಕಮಗಳೂರಿನ ನಿವಾಸಿ ಎಂದು ಹೇಳಿ ವೆಂಕಟೇಶ್​ಗೆ ಆರೋಪಿಗಳು ಫೋನು‌ ಮಾಡಿದ್ದರು. ಹಲಗೇರಿ ಬಳಿ ಹಣ ತಂದರೆ ನಿಮಗೆ ಚಿನ್ನವನ್ನು ಕೊಡುತ್ತೇವೆ ಎಂದು ಹೇಳಿದ್ದರು.
ಆರೋಪಿಗಳ ಮಾತನ್ನು ನಂಬಿ ವೆಂಕಟೇಶ್​ ಹಲಗೇರಿಗೆ ಬಂದಾಗ ಅವರಿಂದ 5 ಲಕ್ಷ ರೂ. ಹಣವನ್ನು ದೋಚಿ ಆರೋಪಿಗಳು ಪರಾರಿಯಾಗಿದ್ದರು. ಫೆ.1 ರಂದು 6 ಜನರ ಗ್ಯಾಂಗ್​ನಿಂದ ಈ ಕೃತ್ಯ ನಡೆದಿತ್ತು. ಪರಾರಿಯಾಗಿದ್ದ 6 ಜನರ ಪೈಕಿ 4 ಆರೋಪಿಗಳನ್ನು ಇದೀಗ ಬಂಧಿಸಲಾಗಿದೆ. ಕೊಪ್ಪಳ ತಾಲೂಕು ಅಳವಂಡಿ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ ನಡೆದಿದೆ.(ದಿಗ್ವಿಜಯ ನ್ಯೂಸ್​)
ಖ್ಯಾತ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವಿಡಿಯೋ ಲೀಕ್​ ಆಗಿದೆ ಎಂದು ಸುಪ್ರೀಂ ಮೆಟ್ಟಿಲೇರಿದ ಸಂತ್ರಸ್ತೆ

ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ ಮಾಡಿದ ಆರೋಪಿ ಪೊಲೀಸ್​ ವಿಚಾರಣೆಯಲ್ಲಿ ಹೇಳಿದ್ದು ಹೀಗೆ…

ಅನುಮಾನಾಸ್ಪದವಾಗಿ ಓಡಾಡುತ್ತಿದೆ ಅಂತಾ ಕೋಳಿಯನ್ನು ವಶಕ್ಕೆ ಪಡೆದ ಪೊಲೀಸರು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
