ಬೆಂಗಳೂರು:ಕೋರ್ಟ್​ ಆವರಣದಲ್ಲಿ ನಡೆದ ವಕೀಲರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಜಗದೀಶ್​ ಅವರನ್ನು ಹಲಸೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ವಕೀಲ ಜಗದೀಶ್ ಅವರು ಕೋರ್ಟ್​ ಆವರಣದಲ್ಲಿ ಅಸಭ್ಯವಾಗಿ ವರ್ತಿಸಿದ್ದಾರೆ ಮತ್ತು ಹೊರಗಡೆಯಿಂದ ಜನರನ್ನು ಕರೆತಂದು ಗೂಂಡಾವರ್ತನೆ ಮಾಡಿದ್ದಾರೆಂದು​ ಆರೋಪಿಸಿ ಶನಿವಾರ ವಕೀಲರ ಸಂಘದ ವಿವೇಕ್​ ರೆಡ್ಡಿ ಅವರು ಪೊಲೀಸ್​ ಆಯುಕ್ತ ಕಮಲ್​ ಪಂತ್​ ಅವರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್​ ಅವರನ್ನು ಬಂಧಿಸಲಾಗಿದೆ.
ಭಾನುವಾರ ಸಂಜೆ ಒಳಗೆ ಜಗದೀಶ್​ ಅವರನ್ನು ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಭ್ರಷ್ಟಾಚಾರ ಪ್ರಕರಣ ಸಂಬಂಧ ದಾಖಲೆಗಳನ್ನು ಸಲ್ಲಿಸಲು ಶುಕ್ರವಾರ ಸಿಟಿ ಸಿವಿಲ್​ ಕೋರ್ಟ್​ಗೆ ಹೋದಂತ ಸಮಯದಲ್ಲಿ ನನ್ನ ಹಾಗೂ ನನ್ನ ಮಗನ ಮೇಲೆ ಕೆಲ ಗೂಂಡಾಗಳು ಹಲ್ಲೆ ಮಾಡಿದ್ದಾರೆಂದು ಜಗದೀಶ್​ ಅವರು ಫೇಸ್​ಬುಕ್​ ಲೈವ್​ನಲ್ಲಿ ಆರೋಪ ಮಾಡಿದ್ದರು.
ಮಗನನ್ನು ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಲಾಗಿದೆ. ಏನಾದರೂ ಆದರೆ, ನಾನು ಯಾರನ್ನು ಬಿಡುವುದಿಲ್ಲ ಎಂದು ಜಗದೀಶ್​ ಅವರು ಕೂಗಾಡಿದ್ದರು. ಅಲ್ಲದೆ, ಪೊಲೀಸ್​ ಆಯುಕ್ತ ಕಮಲ್​ ಪಂತ್​ ಮತ್ತು ಐಜಿಪಿ ಪ್ರವೀಣ್​ ಸೂದ್​ ವಿರುದ್ಧವೂ ಕೂಗಾಡಿದ್ದರು.
ಹೈಸ್ಕೂಲ್‌ 14ರಂದು ಓಪನ್- 15ರವರೆಗೆ ಪಿಯು ಕಾಲೇಜುಗಳಿಗೆ ರಜೆ

ರಾಧಿಕಾ ವಿಚಾರವನ್ನು ಕೆದಕಿ ಮಾಜಿ ಸಿಎಂ ಎಚ್​ಡಿಕೆ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ಶಾಸಕ ಕೆ. ರಾಜು

ಒಬಿಸಿ ಮೀಸಲಾತಿ ಇಕ್ಕಟ್ಟು: ತಾಪಂ, ಜಿಪಂ ಚುನಾವಣೆ ಸವಾಲು- ಆಯೋಗ ರಚನೆ ಅನಿವಾರ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − six =
Remember me
