ಕಲಬುರಗಿ:ಗಾಂಜಾ ದಂಧೆಕೋರರಿಂದ ಮಹಾರಾಷ್ಟ್ರದಲ್ಲಿ ಕರ್ನಾಟಕ ಪೊಲೀಸರ ಮೇಲೆ ಹಲ್ಲೆ ನಡೆದಿದ್ದು, ಸಿಪಿಐ ಶ್ರೀಮಂತ ಇಲ್ಲಾಳ ಅವರು ಗಂಭೀರವಾಗಿ ಗಾಯಗೊಂಡು, ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೀಮಂತ ಇಲ್ಲಾಳ ಅವರ ತಲೆ, ಮುಖ, ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಾಳ ಅವರು ಕಲಬುರಗಿ ಗ್ರಾಮೀಣ ಠಾಣೆಯ ಸಿಪಿಐ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಿಪಿಐ ಇಲ್ಲಾಳ ಅವರ ನೇತೃತ್ವದ ಪೊಲೀಸ್ ತಂಡ ಕಳೆದ ಕೆಲವು ದಿನಗಳಿಂದ ಗಾಂಜಾ ದಂಧೆ ಪ್ರಕರಣದ ಕಾರ್ಯಾಚರಣೆ ನಡೆಸುತ್ತಿತ್ತು. ಕಳೆದ ಎರಡ್ಮೂರು ದಿನಗಳ ಹಿಂದೆ ಗಾಂಜಾ ಪೂರೈಕೆದಾರ ಸಂತೋಷನನ್ನು ಇಲ್ಲಾಳ ಅವರ ತಂಡ ಬಂಧಿಸಿ, ವಿಚಾರಣೆಯನ್ನು ನಡೆಸಿತ್ತು.
ಗಾಂಜಾ ದಂಧೆಯ ಮೂಲವನ್ನು ಭೇದಿಸಲು ನಿನ್ನೆ ಮಧ್ಯಾಹ್ನ ಮಹಾರಾಷ್ಟ್ರಕ್ಕೆ ಇಲ್ಲಾಳ ಅವರ ನೇತೃತ್ವದಲ್ಲಿ ಸುಮಾರು 10 ಜನರ ಪೊಲೀಸ್ ತಂಡ ಹೋಗಿತ್ತು. ಗಾಂಜಾ ಬೆಳೆಯುವ ಹೊಲಗಳಿಗೆ ಹೋಗಿದ್ದ ಸಂದರ್ಭದಲ್ಲಿ ಸುಮಾರು 30 ರಿಂದ 40 ಮಂದಿ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಪೊಲೀಸರ ಮೇಲೆ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಮಹಾರಾಷ್ಟ್ರದ ಉಮರ್ಗಾ ತಾಲ್ಲೂಕಿನ ತರೂರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಸುಮಾರು 9:30ರ ವೇಳೆಗೆ ಪೊಲೀಸರ ಮೇಲೆ ದಾಳಿಯಾಗಿದೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಅದಕ್ಕೆ ಜಗ್ಗದ ದಂಧೆಕೋರರು, ಪೊಲೀಸರನ್ನೇ ಅಟ್ಟಾಡಿಸಿದ್ದಾರೆ. ಈ ವೇಳೆ ದಾಳಿಯಿಂದ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನು ಮಧ್ಯರಾತ್ರಿ ಸುಮಾರು 2.30 ರ ವೇಳೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​

ನಟಿ ಸಮಂತಾ ಅಮೆರಿಕಕ್ಕೆ ತೆರಳಿರುವುದು ಚರ್ಮ ರೋಗದ ಚಿಕಿತ್ಸೆಗಾಗಿ ಅಲ್ಲ… ಇಲ್ಲಿದೆ ಅಸಲಿ ಕಾರಣ

PHOTOS| ಮಾಲ್ಡೀವ್ಸ್​ ಕಡಲ ಕಿನಾರೆಯಲ್ಲಿ ಹಾಟ್​ ಬ್ಯೂಟಿ ಅಮಲಾರ ಬೋಲ್ಡ್​ ಅವತಾರಗಳು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + 10 =
Remember me
