ಮಂಡ್ಯ:ಸರಿಯಾಗಿ ಬೈಕ್ ಓಡಿಸಿ ಎಂದಿದ್ದೇ ತಪ್ಪಾಯ್ತಾ? ಹಿರಿಯ ವ್ಯಕ್ತಿ ಎಂಬುದನ್ನು ನೋಡದೇ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಆತಂಕಕಾರಿ ಘಟನೆ ಹಾಡುಹಗಲಲ್ಲೇ ಮಂಡ್ಯ ತಾಲೂಕಿನ ಯಲಿಯೂರು ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ದುಷ್ಕರ್ಮಿಗಳು ಲಾಂಗ್ ಹಿಡಿದು ಹಲ್ಲೆ ಮಾಡಿದ್ದಾರೆ.
ತೂಬಿನಕೆರೆ ಗ್ರಾಮದ ಶಂಕರೇಗೌಡ (60) ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನೂ ಸರಿಯಾಗಿ ಮೀಸೆ ಚಿಗುರದ ಯುವಕರಿಂದಲೇ ರೌಡಿಸಂ ನಡೆದಿದೆ.
ಪುಂಡರು ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಬೈಕ್ ಓಡಿಸುತ್ತಿದ್ದರು. ಈ ವೇಳೆ ಬೈಕ್ ಸರಿಯಾಗಿ ಓಡಿಸಿ, ನಿಮ್ಮಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಈ ರೀತಿ ಓಡಿಸಿದ್ರೆ ಬೇರೆಯವರು ಸಾಯುತ್ತಾರೆ ಎಂದು ಶಂಕರೇಗೌಡ ಬುದ್ಧಿ ಹೇಳಿದ್ದರು. ಇಷ್ಟಕ್ಕೆ ಆಕ್ರೋಶಗೊಂಡು ದುಷ್ಟರು ಶಂಕರೇಗೌಡರನ್ನು ಅಡ್ಡಗಟ್ಟಿ ಲಾಂಗ್​ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ಹಲ್ಲೆಯಿಂದ ಗಂಭೀರ ಗಾಯವಾಗಿರುವ ವ್ಯಕ್ತಿಗೆ ಮಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ವಾಹನ ಸವಾರರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಮಂಡ್ಯದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಖ್ಯಾತ ನಟಿ ಮೀನಾ ಬಾಳಲ್ಲಿ ಬಡಿದ ಬರಸಿಡಿಲು: ಚೆನ್ನೈನಲ್ಲಿ ಕೊನೆಯುಸಿರೆಳೆದ ಪತಿ ವಿದ್ಯಾಸಾಗರ್​

ಹಿಂದು ಹತ್ಯೆ ಕೇಸ್​: ಉದಯಪುರದಲ್ಲಿ 144 ಸೆಕ್ಷನ್​ ಜಾರಿ, ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದು ಕೊಲೆಯಾದ ವ್ಯಕ್ತಿಯಲ್ಲ

ಲಸಿಕೆ ಹಾಕಿಸಿಕೊಂಡಿರುವುದನ್ನು ಖಾತ್ರಿಪಡಿಸಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + seven =
Remember me
