ಮಂಡ್ಯ:ಕಾವೇರಿ ನದಿಯಲ್ಲಿ ಬಿದ್ದು ಯುವಕ ಕೊಚ್ಚಿ ಹೋದ ಬೆನ್ನಲ್ಲೇ ಎಚ್ಚೆತ್ತಿರುವ ಶ್ರೀರಂಗಪಟ್ಟಣ ತಾಲೂಕು ಆಡಳಿತ ಕಾವೇರಿ ನದಿ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸುವ ಮೂಲಕ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ರಾಜ್ಯದಲ್ಲಿ ಎಡೆಬಿಡದೆ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟುಗಳು ತುಂಬಿ ತುಳುಕುತ್ತಿದೆ. ಇದರಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೆಆರ್​ಎಸ್​ ಡ್ಯಾಂ ಕೂಡ ಒಂದು. ನೀರಿನ ಮಟ್ಟ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ನದಿಗೆ ನೀರು ಹರಿಬಿಡಲಾಗಿದೆ. ಕಾವೇರಿ ತೀರ ಪ್ರದೇಶದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗಿದೆ.
ನಿನ್ನೆ (ಜುಲೈ 13) ಬೆಳಗ್ಗೆ ಕಾಲು ಜಾರಿ ನದಿಯಲ್ಲಿ ಬಿದ್ದು ಬೆಂಗಳೂರಿನ ಯಲಹಂಕ ಮೂಲದ ಅಶೋಕ್ (26) ಕೊಚ್ಚಿ ಹೋಗಿದ್ದಾನೆ. ಅಶೋಕ್​ ತನ್ನ ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಸಂಗಮಕ್ಕೆ ಬಂದಿದ್ದರು. ಪೂಜೆಗೂ ಮುನ್ನ ನದಿಯಲ್ಲಿ ಕಾಲು ತೊಳೆಯುವ ವೇಳೆ ಕಾಲು ಜಾರಿ ಬಿದ್ದು ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಎಚ್ಚೆತ್ತಿರುವ ತಾಲೂಕು ಆಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿದೆ.
ನದಿಯಲ್ಲಿ ಅಸ್ತಿ ಬಿಡುವುದಕ್ಕೂ ನಿರ್ಬಂಧ ವಿಧಿಸಿ, ಶ್ರೀರಂಗಪಟ್ಟಣ ತಹಸೀಲ್ದಾರ್ ಶ್ವೇತಾ ರವೀಂದ್ರ ಆದೇಶ ಹೊರಡಿಸಿದ್ದಾರೆ. ಪ್ರವಾಸಿ ಸ್ಥಳಗಳಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಗಮ ರಸ್ತೆಯನ್ನೇ ಬಂದ್ ಮಾಡಲಾಗಿದ್ದು, ಪ್ರವಾಸಿಗರನ್ನು ಬ್ಯಾರಿಕೇಡ್ ಬಳಿಯೇ ತಡೆದು ವಾಪಾಸ್ ಕಳುಹಿಸಲಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ಅನ್ಯಗ್ರಹದಲ್ಲಿ ನೀರು ಪತ್ತೆಮಾಡಿದ ಜೇಮ್ಸ್​​ ವೆಬ್!; ಸುಳಿವು ನೀಡಿದ ನಾಸಾದ ಟೆಲಿಸ್ಕೋಪ್..

ಏರೋಡ್ರೋಮ್​ಗಳಾಗಲಿವೆ ಡ್ಯಾಮ್​ಗಳು!; ಸೀಪ್ಲೇನ್​ಗಳ ಹಾರಾಟಕ್ಕೆ ಸಿದ್ಧತೆ..

ಜುಲೈ 16ರಿಂದ ಇಸ್ಮಾರ್ಟ್ ಜೋಡಿ; ಸ್ಟಾರ್ ಸುವರ್ಣಗಾಗಿ ಗಣೇಶ್ ಹೊಸ ರಿಯಾಲಿಟಿ ಶೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
