ಮಂಡ್ಯ:ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಫ್ಲೈ ಓವರ್​ನ ಪಿಲ್ಲರ್​ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಚಾಲಕನ ಸಮೇತ ಟಿಪ್ಪರ್​ ಲಾರಿ ಸುಟ್ಟು ಕರಕಲಾಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ಇಂದು ಬೆಳಗ್ಗಿನ ಜಾವದಲ್ಲಿ ನಡೆದಿದೆ.
ಮದ್ದೂರಿನ ಬೆಂಗಳೂರು-ಮೈಸೂರು ಹೆದ್ದಾರಿಯ ಎಲ್.ಐ.ಸಿ ಕಛೇರಿಯ ಮುಂಭಾಗವೇ ಘಟನೆ ನಡೆದಿದೆ. ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್​ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಫ್ಲೈ ಓವರ್​ ಪಿಲ್ಲರ್​ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆಯಲ್ಲಿ ಚಾಲಕ ವಾಹನದೊಳಗೆ ಸಿಲುಕಿ ಹೊರಬರಲಾಗದೇ ಟಿಪ್ಪರ್​ನಲ್ಲೇ ಸಜೀವ ದಹನವಾಗಿದ್ದಾನೆ. ಮೃತ ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ಚಾಲಕನ ಶವವನ್ನು ಹೊರ ತೆಗೆದಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಟಿಪ್ಪರ್ ಪಕ್ಕಕ್ಕೆ ಸರಿಸಿ ಪೊಲೀಸರು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ವೋಟ್​ ಮಾಡಿದ ಭಾರತದ ನ್ಯಾಯಮೂರ್ತಿ

ರಾಜ್ಯದೆಲ್ಲೆಡೆ ಜೇಮ್ಸ್ ಜಾತ್ರೆ: ಅಪ್ಪು ನೆನೆದು ಅಭಿಮಾನಿಗಳ ಕಣ್ಣೀರು, ನೆಲದ ಮೇಲೆಯೇ ಕುಳಿತು ಸಿನಿಮಾ ವೀಕ್ಷಣೆ

ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪತ್ತು ಪತ್ತೆ!; 18 ಅಧಿಕಾರಿಗಳಿಗೆ ಸೇರಿದ 77 ಕಡೆ ಎಸಿಬಿ ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 7 =
Remember me
