ಮಂಡ್ಯ:ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಂಸದೆ ಸುಮಲತಾ ಅಂಬರೀಷ್​ ಅವರಿಗೆ ಮನವಿ ಸಲ್ಲಿಸಿದ್ರೂ ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಂಡಿಸಿದ್ದೆಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮಸ್ಥರು ಮೈಸೂರು ಸಂಸದ ಪ್ರತಾಪ್​ ಸಿಂಹ ಮೊರೆ ಹೋಗಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರಿಯ ಗೌಡಹಳ್ಳಿ ಬಳಿ ಅಂಡರ್ ಪಾಸ್ ನಿರ್ಮಾಣ ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹಗೆ ಗೌಡಹಳ್ಳಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ಅಂಡರ್ ಪಾಸ್ ಇಲ್ಲದಿರುವುದರಿಂದ ಬಸ್​ಗಾಗಿ ಮತ್ತೊಂದು ಊರಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಕೃಷಿ ಚಟುವಟಿಗಳಿಗೂ ಸಾಕಷ್ಟು ತೊಂದರೆಯಾಗಿದೆ. ಹೀಗಾಗಿ ಸಮಸ್ಯೆಯನ್ನು ಪರಿಹರಿಸುವಂತೆ ಸಾಕಷ್ಟು ಬಾರಿ ಗ್ರಾಮಸ್ಥರು ಪ್ರತಿಭಟನೆ ಮಾಡಿದ್ದಾರೆ. ಆದರೂ ಈವರೆಗೆ ಸಮಸ್ಯೆ ಪರಿಹಾರವಾಗಿಲ್ಲ. ಇದರಿಂದ ಮೈಸೂರು ಸಂಸದ ಪ್ರತಾಪ್ ಸಿಂಹಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಗ್ರಾಮಸ್ಥರ ಮನವಿಗೆ ಸ್ಪಂದಿಸಿರುವ ಸಂಸದ ಪ್ರತಾಪ್​ ಸಿಂಗ್​ ಸಮಸ್ಯೆ ಪರಿಹಾರ ಮಾಡುವ ಭರವಸೆ ನೀಡಿದ್ದಾರೆ. ಈ ವೇಳೆ ಸಂಸದರಿಗೆ ಗೌಡಹಳ್ಳಿ ಗ್ರಾಮಸ್ಥರು ಜೈಕಾರ ಕೂಗಿ ಹಾರ ಹಾಕಿ ಗೌರವಿಸಿದರು.(ದಿಗ್ವಿಜಯ ನ್ಯೂಸ್​)
ಚಲಿಸುವ ಬೈಕ್​ ಮೇಲೆಯೇ ರೊಮ್ಯಾನ್ಸ್​: ಚಾ.ನಗರದಲ್ಲಿ ಪ್ರೇಮಿಗಳಿಬ್ಬರ ಹುಚ್ಚಾಟದ ವಿಡಿಯೋ ವೈರಲ್!​

21ನೇ ವಯಸ್ಸಿಗೆ ಅಮೇಜಾನ್​ ಲಂಡನ್​ನಲ್ಲಿ ಕೆಲಸ ಗಿಟ್ಟಿಸಿದ ಕುವರಿ: ಸಂಬಳ ಕೇಳಿದ್ರೆ ಹುಬ್ಬೇರೋದು ಖಂಡಿತ!

ಪ್ರಶಾಂತ್​ ನೀಲ್​ ತಪ್ಪು ಮಾಡಿದ್ರಾ? KGF-2 ಯಶಸ್ಸಿನ ನಡುವೆಯೇ ಚಿತ್ರತಂಡಕ್ಕೆ ಎದುರಾಯ್ತು ಹೊಸ ಸಂಕಷ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 13 =
Remember me
