ಮಂಗಳೂರು:ಬೆಳ್ಳಂಬೆಳಗ್ಗೆ ಮಂಗಳೂರಿನ ಹೊರ ವಲಯದಲ್ಲಿ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ರಾಜಾ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಮುಲ್ಕಿ ಪ್ರದೇಶದ ಬಳಿ ಸಿಸಿಬಿ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಮಂಗಳೂರು ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ.
ಆರೋಪಿಗಳಾದ ಅರ್ಜುನ್ ಮೂಡುಶೆಡ್ಡೆ, ಮನೋಜ್ ಅಲಿಯಾಸ್ ಬಿಂದಾಸ್ ಮನೋಜ್​ ಕಾಲಿಗೆ ಗುಂಡೇಟು ಬಿದ್ದಿದೆ. ಮೊದಲು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಯಿತು. ಬಳಿಕ ಎರಡು ಸುತ್ತು ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಯಿತು.
ಘಟನೆಯಲ್ಲಿ ಪೊಲೀಸ್​ ಸಿಬ್ಬಂದಿಗೂ ಗಾಯಗಳಾಗಿದೆ. ಗಾಯಗೊಂಡಿರುವ ಆರೋಪಿಗಳು ಹಾಗೂ ಸಿಬ್ಬಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ನಟಿ ಪ್ರಣೀತಾಗೆ ಹೆಣ್ಣು ಮಗು: ಅಮ್ಮ-ಮಗಳ ಫೋಟೋ ನೋಡಿ ಖುಷಿಯಾದ ಅಭಿಮಾನಿಗಳು

ಮದ್ವೆಯಾದ ಮಾರನೇ ದಿನವೇ ಭಾರಿ ಎಡವಟ್ಟು ಮಾಡಿಕೊಂಡು ವಿವಾದಕ್ಕೆ ಗುರಿಯಾದ ನಯನತಾರಾ!

ಬೆಳ್ಳಂಬೆಳಗ್ಗೆ BMTC ಬಸ್ ಡಿಕ್ಕಿ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 2 =
Remember me
