ಮಂಗಳೂರು:ಕಾಲೇಜು ವಿದ್ಯಾರ್ಥಿನಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಪುರುಷ, ಇಬ್ಬರು ಮಹಿಳೆಯರನ್ನು ಮಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಪಿಯುಸಿ ಓದುತ್ತಿದ್ದ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ನಾಲ್ವರನ್ನು ರಕ್ಷಿಸಲಾಗಿದೆ. ಇವರು ಮಂಗಳೂರಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿಯರು. ಮಂಗಳೂರಿನ ಪೆಂಟ್ ಹೌಸ್ ಒಂದರಲ್ಲಿ ಈ ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿತ್ತು.
ಬಂಧಿತರನ್ನು ಶಮೀನಾ, ಆಯಿಷಮ್ಮ ಮತ್ತು ಸಿದ್ಧಿಕ್​ ಎಂದು ಗುರುತಿಸಲಾಗಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿಡಿಯೋ ರೆಕಾರ್ಡ್​ ಮಾಡಿ ಯುವತಿಯರು ಮತ್ತು ಬಾಲಕಿಯರನ್ನು ಬೆದರಿಸಲಾಗುತ್ತಿತ್ತು.
ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ‌ ಮೇರೆಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಮತ್ತು ಐ.ಟಿ.ಪಿ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಮಂಗಳೂರು ನಗರ ಪೊಲೀಸ್ ಕಮಿಷನರ್​ ಎನ್. ಶಶಿಕುಮಾರ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಡಿ.ಸಿ.ಪಿ ಹರಿರಾಂ ಶಂಕರ್ ಮೇಲುಸ್ತುವಾರಿಯಲ್ಲಿ ತನಿಖೆಗೆ ಸೂಚನೆ ನೀಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಬಣ್ಣದ​ ಲೋಕಕ್ಕೆ ಗುಡ್​ಬೈ ಹೇಳಿ ಗ್ರಾ.ಪಂ ಚುನಾವಣಾ ಕಣಕ್ಕಿಳಿದ ಮಾಡೆಲ್​: ಗ್ಲಾಮರ್​ ಗೊಂಬೆ ಕೊಟ್ಟ ಕಾರಣ ಹೀಗಿದೆ…

ಮೃಗಾಲಯದ ಕರಡಿ ಆವರಣದ ಒಳಗಡೆ ಮಗುವನ್ನು ಎಸೆದ ತಾಯಿ: ಮುಂದೇನಾಯ್ತು? ಇಲ್ಲಿ ಭಯಾನಕ ವಿಡಿಯೋ

ಜನರೇ ಎಚ್ಚರ! ಒಂದು ಫೋನ್​ ಕಾಲ್​, ಒಂದು ಸಣ್ಣ ಎಡವಟ್ಟು… 70 ಸಾವಿರ ಹಣ ಕಳೆದುಕೊಂಡ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + two =
Remember me
