ಮೈಸೂರು:ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಅನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕರೊನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆಆರ್ ಸರ್ಕಲ್, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಅರಣ್ಯ ಅಧಿಕಾರಿ ಕರಿಕಾಳನ್ ಮಾತನಾಡಿ ದಸರಾ ಮಹೋತ್ಸವ ಹಿನ್ನಲೆ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳಿಗೆ ತೂಕ ಮಾಡಿಸಲಾಗಿದೆ. ಎಲ್ಲ ಅನೆಗಳು ಅರೋಗ್ಯವಾಗಿದೆ. ಒಂದು ವಿಶೇಷವೆನೆಂದರೇ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಬಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.
ಮಲ್ಟಿಫ್ಲೆಕ್ಸ್​ಗಳಲ್ಲಿ ಪಾಪ್​ಕಾರ್ನ್​ ದುಬಾರಿ ಏಕೆ? PVR ಮುಖ್ಯಸ್ಥ ಅಜಯ್​ ಬಿಜ್ಲಿ ಕೊಟ್ಟ ಕಾರಣವಿದು…

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿರೋಧಿಸಿದ್ದಕ್ಕೆ ಬೆಂಗ್ಳೂರಲ್ಲಿ ಟಿಪ್ಪು ಫೋಟೋ ಹರಿದ ಪುನೀತ್​ ಕೆರೆಹಳ್ಳಿ ಟೀಂ

ಇನ್ನೊಂದು ಬೆಳ್ಳಿ ಕಾಲುಂಗುರ; ಸಾ.ರಾ. ಗೋವಿಂದು ನಿರ್ಮಾಣದ ಚಿತ್ರದಲ್ಲಿ ಧನ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + four =
Remember me
