ಮೈಸೂರು:ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ ಜಂಬೂ ಸವಾರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅರಮನೆ ಸುತ್ತಲಿನ ರಸ್ತೆಗಳಲ್ಲಿ ರಾಜಪಥಕ್ಕೆ ಅನ್ವಯ ಆಗುವಂತೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಜಂಬೂ ಸವಾರಿ ಸಾಗುವ ರಸ್ತೆಯ ಅಕ್ಕ-ಪಕ್ಕದಲ್ಲಿರುವ ಪಾರಂಪರಿಕ ಕಟ್ಟಡಗಳು, ಶಿಥಿಲಾವಸ್ಥೆಯಲ್ಲಿರುವ ಕಟ್ಟಡದ ಮೇಲೆ ನಿಂತು ವಿಜಯದಶಮಿ ಮೆರವಣಿಗೆ ವೀಕ್ಷಣೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ. ಮುನ್ನೆಚ್ಛರಿಕಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಅರಮನೆ ಅಂಗಳದಲ್ಲಿ 25 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದ್ದು, ಪಾಸ್‌ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕೆ ಪೌರಕಾರ್ಮಿಕರ ನಿಯೋಜನೆ ಮಾಡಲಾಗಿದೆ. ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದಂತೆ ಸ್ಥಳೀಯ ಆಡಳಿತ ಮನವಿ ಮಾಡಿದೆ.
ಸಂಘ-ಸಂಸ್ಥೆಗಳಿಂದ ಕುಡಿಯುವ ನೀರು ಹಾಗೂ ಮಜ್ಜಿಗೆ ವಿತರಣೆಗೆ ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆ ಪೂರ್ವಾನುಮತಿ ಪಡೆದವರಿಗೆ ಮಾತ್ರ ಅರಮನೆ ಒಳಗೆ ಪ್ರವೇಶ ಕಲ್ಪಿಸಲಾಗುತ್ತದೆ.(ದಿಗ್ವಿಜಯ ನ್ಯೂಸ್​)
ಒಂದೇ ಒಂದು ಕುರಿ ಇದ್ರೂ ಕೋಟ್ಯಧಿಪತಿಗಳಾಗ್ಬೋದು! ಮಿರ ಮಿರ ಮಿಂಚುತ್ತಿರೋ ಇದರ ಬೆಲೆ ಎಷ್ಟು ಗೊತ್ತಾ?

ತಮ್ಮ ನಾಯಿಗೆ ಕಚ್ಚಿತೆಂದು ಪಕ್ಕದ ಮನೆಯ ನಾಯಿಯ ಮೇಲೆ ಇದೆಂಥ ಹೀನ ಕೃತ್ಯ! ಸಾವು ಬದುಕಿನ ನಡುವೆ ಶ್ವಾನ

ಸೈಬರ್​ ಅಪರಾಧಿಗಳಿಗೆ ಶಾಕ್​ ನೀಡಿದ ಸಿಬಿಐ: ಏಕಕಾಲದಲ್ಲಿ ಬೆಂಗಳೂರು ಸೇರಿದಂತೆ 105 ಕಡೆ ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 10 =
Remember me
