ಮೈಸೂರು:ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಮರ್ಯಾದಾ ಹತ್ಯೆ ನಡೆದಿದೆ ಎನ್ನಲಾಗಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಹೆತ್ತವರಿಂದಲೇ ಅಪ್ರಾಪ್ತ ಮಗಳ ಕೊಲೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.
ಪಿರಿಯಾಪಟ್ಟಣ ತಾಲ್ಲೂಕು ಕಗ್ಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ದ್ವಿತೀಯ ಪಿಯು ವಿಧ್ಯಾರ್ಥಿನಿ ಶಾಲಿನಿ (17) ಕೊಲೆಯಾದ ದುರ್ದೈವಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಸುರೇಶ್ ಹಾಗೂ ತಾಯಿ ಬೇಬಿಯನ್ನು ಪಿರಿಯಾಪಟ್ಟಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆಯಾದ ಶಾಲಿನಿ, ಪಕ್ಕದ ಗ್ರಾಮದ ಮೆಲ್ಲಹಳ್ಳಿಯ ಯುವಕ ಮಂಜು ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರ ಪ್ರೀತಿಗೆ ಶಾಲಿನಿ ಪಾಲಕರು ವಿರೋಧ ವ್ಯಕ್ತಪಡಿಸುತ್ತಿದ್ದರು. ವಿರೋಧದ ನಡುವೆಯೂ ಮದುವೆಯಾಗಲು ಪ್ರೇಮಿಗಳು ನಿರ್ಧರಿಸಿದ್ದರು. ಇದಲ್ಲದೆ, ಪ್ರಿಯಕರನಿಗಾಗಿ ಶಾಲಿನಿ ಮನೆ ಬಿಟ್ಟಿದ್ದಳು.
ಮಗಳು ಮನೆ ಬಿಟ್ಟ ಬಳಿಕ ಪಾಲಕರು ಠಾಣೆ ಮೆಟ್ಟಲೇರಿದ್ದರು. ನಾನು ಮನೆಗೆ ಹೋಗುವುದಿಲ್ಲ ಎಂದು ಠಾಣೆಯಲ್ಲೇ ಪೊಲೀಸರ ಮುಂದೆ ಶಾಲಿನಿ ಪಟ್ಟು ಹಿಡಿದಿದ್ದಳು. ಬಳಿಕ ಶಾಲಿನಿಯನ್ನು ಬಾಲಮಂದಿರದ ವಶಕ್ಕೆ ನೀಡಲಾಗಿತ್ತು. ಇತ್ತೀಚೆಗೆ ಮಗಳನ್ನು ಮನೆಗೆ ಕರೆತಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಾಲಿನಿ ಮೃತದೇಹ ಜಮೀನಿನಲ್ಲಿ ಪತ್ತೆಯಾಗಿದೆ.
ತಮಗೆ ಅವಮಾನ ಮಾಡಿದಕ್ಕೆ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶಾಲಿನಿ ಪಾಲಕರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.(ದಿಗ್ವಿಜಯ ನ್ಯೂಸ್​)
ಮಗು ಜತೆಯಲ್ಲೇ ನಿತ್ಯವು ಕರ್ತವ್ಯಕ್ಕೆ ಹಾಜರಾಗುವ ಮಹಿಳಾ ಪೊಲೀಸ್​ ಅಧಿಕಾರಿ: ಕಾರಣ ಮನಕಲಕುವಂತಿದೆ

ಇದೆಂಥಾ ವಿಸ್ಮಯ! ಆಮ್ಲೆಟ್​ ಹಾಕಲು ಮೊಟ್ಟೆ ಹೊಡೆದ ಹೋಟೆಲ್​ ಮಾಲೀಕನಿಗೆ ಕಾದಿತ್ತು ಶಾಕ್​

ಬೇಕಂತಲೇ ಬೈಕ್​ ಡಿಕ್ಕಿ ಹೊಡೆದು ಪರಾರಿಯಾದ ಕಾನೂನು ವಿದ್ಯಾರ್ಥಿ: ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + thirteen =
Remember me
