ಮೈಸೂರು:ಪತಿಯ ಕತ್ತು ಹಿಸುಕಿ ಕೊಲೆ ಮಾಡಿ, ಹೃದಯಾಘಾತ ಎಂದು ಬಿಂಬಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಬಂಧಿಸಿರುವ ಘಟನೆ ಹುಣಸೂರು ತಾಲ್ಲೂಕಿನ ಹುಂಡಿಮಾಳ ಗ್ರಾಮದಲ್ಲಿ ನಡೆದಿದೆ.
ಲೋಕಮಣಿ (36) ಕೊಲೆಯಾದ ದುರ್ದೈವಿ. 9 ವರ್ಷಗಳ ಹಿಂದೆ ಲೋಕಮಣಿ, ಎಚ್.ಡಿ .ಕೋಟೆ ತಾಲೂಕಿನ ಅಗಸನಹುಂಡಿ ಗ್ರಾಮದ ಶಿಲ್ಪಾ ಎಂಬಾಕೆಯನ್ನು ಮದುವೆಯಾಗಿದ್ದ. ಆದರೆ, ಶಿಲ್ಪಾಗೆ ಪಕ್ಕದ ಮನೆಯ ಅಭಿ ಎಂಬಾತನ ಜತೆ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ.
ಈ ವಿಚಾರ ಗಂಡನಿಗೆ ತಿಳಿದು, ಮನೆಯಲ್ಲಿ ಗಲಾಟೆ ನಡೆದಿದೆ. ಯಾರಿಗೂ ಹೇಳಬೇಡಿ ಅಂತಾ ಕ್ಷಮೆಯಾಚಿಸಿದ್ದ ಶಿಲ್ಪಾ, ಲೋಕಮಣಿ ಮಲಗಿದ್ದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ ಎನ್ನಲಾಗಿದೆ. ಇದಾದ ಬಳಿಕ ಗಂಡ ಹೃದಯಘಾತದಿಂದ ಮೃತಪಟ್ಟಿದ್ದಾನೆಂದು ಬಿಂಬಿಸಿ, ಅಂತ್ಯಕ್ರಿಯೆಯನ್ನೂ ನೆರವೇರಿಸಿದ್ದಳು.
ಘಟನೆ ನಡೆದ ಹಲವು ದಿನಗಳ ನಂತರ ಹುಣಸೂರು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಶಿಲ್ಪಾಳನ್ನು ಹುಣಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಪಕ್ಕದ ಮನೆನ ಅಭಿ ಎಂಬಾತ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಮೀಸಲು ಅರಣ್ಯದೊಳಗೆ ನುಗ್ಗಿ ಕಾಡಾನೆಯನ್ನು ಕೆಣಕಿದ ಲೇಡಿ ಯೂಟ್ಯೂಬರ್​ಗೆ ಬಿಗ್​ ಶಾಕ್​!

ಪ್ರಿಯಾ ಆನಂದ್​ಗೆ ನಿತ್ಯಾನಂದರನ್ನು ಮದ್ವೆಯಾಗೋ ಆಸೆಯಂತೆ! ಕಾಲಿವುಡ್​ ಬ್ಯೂಟಿ ಕೊಟ್ಟ ಕಾರಣ ಹೀಗಿದೆ…

VIDEO: ಚಪ್ಪಲಿ ಹಾಕಿಕೊಂಡು ದಿನವೂ ವಾಕಿಂಗ್​ಗೆ ಹೋಗೋ ಆನೆ! ಈ ಕುತೂಹಲ ನೋಡಲು ಭಕ್ತರ ದಂಡು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
