ಮೈಸೂರು:ಹಾಡಹಗಲೇ ಕಾರು ಅಡ್ಡಗಟ್ಟಿ ಮುಸುಕುಧಾರಿ ದುಷ್ಕರ್ಮಿಗಳು ದಾಳಿ ಮಾಡಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯ ಕಡಕೋಳ ಬಳಿ ನಡೆದಿದ್ದು, ಸ್ಥಳೀಯರನ್ನು ಆತಂಕಕ್ಕೆ ದೂಡಿದೆ.
ಸುಮಾರು ಏಳೆಂಟು ಯುವಕರ ಗುಂಪು ಮುಸುಕು ಧರಿಸಿ ದೊಣ್ಣೆಗಳನ್ನು ಹಿಡಿದು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಚಾಲಕ ಪಾರಾಗಲು ಯತ್ನಿಸಿದರೂ ಬಿಡದ ಗುಂಪು ಒಳಗೆ ತಳ್ಳಿ ಕಾರಿನ ಸಮೇತ ಪರಾರಿಯಾದರು. ಇದೇ ವೇಳೆ ಎದುರಿನಿಂದ ಬರುತ್ತಿದ್ದ ವಾಹನದಲ್ಲಿದ್ದ ಪ್ರಯಾಣಿಕರು ತಮ್ಮ ಮೊಬೈಲ್​ನಲ್ಲಿ ದೃಶ್ಯಗಳನ್ನು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಮಾಹಿತಿ ಅರಿತ ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ದುಷ್ಕರ್ಮಿಗಳ ಗುಂಪು ಕಾರಿನ ಸಮೇತ ನಾಪತ್ತೆಯಾಗಿದೆ. ಇದೀಗ ಹುಟ್ಟಿಕೊಂಡಿರುವ ಪ್ರಶ್ನೆಗಳೆಂದರೆ, ಘಟನೆ ನಡೆದಿದ್ದು ಯಾಕೆ? ದಾಳಿ ಮಾಡಿದ ಗುಂಪು ಎಲ್ಲಿಯವರು? ಮುಸುಕು ಧರಿಸಿ ದಾಳಿ ನಡೆಸಿದ ಹಿನ್ನಲೆ ಏನು? ಎಂಬ ಹಲವಾರು ಪ್ರಶ್ನೆಗಳು ಉದ್ಭವಿಸಿದೆ.
ಸದ್ಯ ಮೊಬೈಲ್​ನಲ್ಲಿ ಸೆರೆಯಾದ ದೃಶ್ಯಗಳು ಪೊಲೀಸರ ಕೈ ಸೇರಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜಾಲತಾಣದಲ್ಲಿಯೂ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಪೊಲೀಸ್​ ವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕೆಲ್ಸ ಸಿಗಲಿಲ್ಲ ಅಂತಾ ಸೀರೆ ಉಟ್ಕೊಂಡು ಭಿಕ್ಷೆ ಬೇಡ್ತಿದ್ದ ಯುವಕ: ಆತನ ಮಾತು ಕೇಳಿ ಪೊಲೀಸರೇ ಶಾಕ್​!

4ನೇ ಅಲೆ ತಡೆಗೆ ಬಿಗಿಬಲೆ: ದೇಶದ ಹಲವೆಡೆ ಸೋಂಕು ಹೆಚ್ಚಳ; ಸರ್ಕಾರ ಹೈ-ಅಲರ್ಟ್

ತೈಲ ತೆರಿಗೆ ಹಣ ಎಲ್ಲೋಯ್ತು?; ಪ್ರತಿಪಕ್ಷಗಳ ಪ್ರಶ್ನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 2 =
Remember me
