ಮೈಸೂರು:ಗರ್ಭಿಣಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ವರದಕ್ಷಿಣೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.
ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ವೇತಾ ಕೆಲ್ಲೂರು ಗ್ರಾಮದವರು. ಕಿತ್ತೂರು ಗ್ರಾಮದ ಬಸವರಾಜು ಜೊತೆ ಮದುವೆ ಮಾಡಿಕೊಡಲಾಗಿತ್ತು. ಈ ವೇಳೆ 100 ಗ್ರಾಂ ಚಿನ್ನ ಹಾಗೂ ಒಂದು ಲಕ್ಷ ರೂಪಾಯಿ ನಗದನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು.
ವರದಕ್ಷಿಣೆ ನೀಡಿದರೂ ಮತ್ತೆ ಮತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಮೂರು ತಿಂಗಳ ಹಿಂದೆಯೇ ನಾಲೆಗೆ ಹಾರಿ ಆತ್ಮಹತ್ಯೆಗೆ ಶ್ವೇತಾ ಯತ್ನಿಸಿದ್ದಳು ಎಂದು ಆಕೆಯ ಪಾಲಕರು ಹೇಳಿದ್ದಾರೆ.
ಮಗಳ ಸಾವಿಗೆ ಆಕೆಯ ಪತಿ ಬಸವರಾಜ್, ಅತ್ತೆ ಸರೋಜಮ್ಮ ಹಾಗೂ ನಾದಿನಿ ಲತಾ ಕಾರಣ ಎಂದು ಆರೋಪಿಸಿ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಶ್ವೇತಾ ಪಾಲಕರು ಪ್ರಕರಣ ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪತಿ, ಅತ್ತೆ, ಮಾವ ಹಾಗೂ ನಾದಿನಿ ನಾಪತ್ತೆಯಾಗಿದೆ. ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ಹನಿಮೂನ್​ ವೇಳೆ ಬೆನ್ನು ಹುಷಾರು! ದೀಪಕ್​ ಚಹರ್​ಗೆ ಎಚ್ಚರಿಕೆ ನೀಡಿದ ಸಹೋದರಿ ಮಾಲತಿ

ಎಣ್ಣೆ ಬಿಡ್ತಿಲ್ಲ, ದುಡ್ಡು ಉಳಿತಿಲ್ಲ… ಹುಂಜಕ್ಕೆ ಒಂದೇ ಒಂದು ಪೆಗ್​ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಮಾಲೀಕ!

ನಾವೆಲ್ಲರೂ ಒಂದೇ ಚಿತ್ರರಂಗದವರು; ದಕ್ಷಿಣ-ಉತ್ತರ ಅಂತೇನೂ ಇಲ್ಲ ಎಂದ ಖಿಲಾಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
