ಬೆಂಗಳೂರು:ರಾಷ್ಟ್ರೀಯ ತನಿಖಾ ಆಯೋಗ (ಎನ್​ಐಎ)ದ ದಾಳಿಯ ಬೆನ್ನಲ್ಲೇ ಫುಲ್​ ಅಲರ್ಟ್​ ಆಗಿರುವ ರಾಜ್ಯ ಪೊಲೀಸ್​ ಇಲಾಖೆ, ಎನ್​ಐಎ ಮಾಹಿತಿ ಆಧರಿಸಿ, ರಾಜ್ಯದ ವಿವಿಧೆಡೆ ಪಾಫುಲರ್​​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ)ದ ನಾಯಕರು ಹಾಗೂ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿದೆ.
ದಕ್ಷಿಣ ಕನ್ನಡ, ವಿಜಯಪುರ, ಶಿವಮೊಗ್ಗ, ರಾಮನಗರ, ಕೋಲಾರ, ಉಡುಪಿ, ರಾಯಚೂರು, ಚಾಮರಾಜನಗರ ಹಾಗೂ ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಪಿಎಫ್​ಐ ಮುಖಂಡರು ಹಾಗೂ ಕಾರ್ಯಕರ್ತರ ಮನೆಗಳ ಮೇಲೆ ರಾಜ್ಯದ ಪೊಲೀಸರು ದಾಳಿ ಮಾಡಿದ್ದಾರೆ.
ದಾಳಿಯ ವೇಳೆ ಸುಮಾರು 40 ಕ್ಕೂ ಹೆಚ್ಚು ಪಿಎಫ್​ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದ್ದು, ಎಲ್ಲರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಎನ್​ಐಎ ಬಳಿಕ ನಡೆದಿರುವ ಎರಡನೇ ಹಂತದ ದಾಳಿ ಇದಾಗಿದೆ.
ಮೊದಲ ಬಾರಿಗೆ ಎನ್​ಐಎ ದಾಳಿ ನಡೆಸಿತ್ತು. ಇದೀಗ ಎನ್​ಐಎ ಕೊಟ್ಟಿರುವ ಮಾಹಿತಿಯನ್ನು ಆಧರಿಸಿ ರಾಜ್ಯ ಪೊಲೀಸರು ಈ ದಾಳಿ ನಡೆಸಿದ್ದಾರೆ. ಎನ್​ಐಎ ದಾಳಿ ವಿರೋಧಿಸಿ, ಪ್ರತಿಭಟನೆ ಮಾಡಿ, ಆ ಪ್ರತಿಭಟನೆಯನ್ನು ವಿದ್ವಂಸಕ ಕೃತ್ಯಕ್ಕೆ ತಿರುಗಿಸಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ. ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳು ನಡೆಯಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಪೊಲೀಸರು ಪಿಎಫ್​ಐ ಮೇಲೆ ದಾಳಿ ಮಾಡಿದ್ದು, ಕೆಲ ಮುಖಂಡರು ಮತ್ತು ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಿಚಾರಣೆಯನ್ನು ಮುಂದುವರಿಸಿದ್ದಾರೆ.
ನವರಾತ್ರಿ: ರೈಲ್ವೆ ಪ್ರಯಾಣಿಕರಿಗೆ ವಿಶೇಷ ಮೆನು ನೀಡಿದ ರೈಲ್ವೆ ಸಚಿವಾಲಯ

ಚಂಡೀಗಢ ವಿವಿ ಹಾಸ್ಟೆಲ್ ವಿಡಿಯೋ ಲೀಕ್​​: ಯೋಧ ಅರೆಸ್ಟ್​, ಆರೋಪಿ ವಿದ್ಯಾರ್ಥಿನಿಗೂ ಯೋಧನಿಗಿದ್ದ ಸಂಬಂಧವೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + eighteen =
Remember me
