ಬೆಂಗಳೂರು:ದೇಶದಲ್ಲಿ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಸೇರಿದಂತೆ ಒಟ್ಟು 8 ಸಂಘಟನೆಗಳನ್ನು ಕೇಂದ್ರ ಸರ್ಕಾರ ಮಾಡಿರುವ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ.
ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಗಸ್ತು ನಿಯೋಜನೆ ಮಾಡಲಾಗಿದೆ. ಕೆ.ಜಿ ಹಳ್ಳಿ, ಡಿ.ಜೆ.ಹಳ್ಳಿ, ಬ್ಯಾಟರಾಯನಪುರ, ಪುಲಕೇಶಿನಗರ, ಶಿವಾಜಿ ನಗರ, ಜೆ‌ಜೆ ನಗರ ಹಾಗೂ ತಲಘಟ್ಟಪುರ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶಗಳುಳ್ಳ ಜಾಗಗಳಲ್ಲಿ ಪೊಲೀಸ್ ಗಸ್ತು ತಿರುಗಲಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಪ್ರತಿ ಏರಿಯಾದಲ್ಲೂ ಪೊಲೀಸರು ಗಸ್ತು ತಿರುಗಲಿದ್ದಾರೆ ಎಂದು ದಿಗ್ವಿಜಯ ನ್ಯೂಸ್​ಗೆ ನಗರ ಪೊಲೀಸ್ ಆಯುಕ್ತರಿಂದ ಮಾಹಿತಿ ದೊರೆತಿದೆ.
ಪಿಎಫ್​ಐ ಮತ್ತು ಅದರ ಅಂಗ ಸಂಸ್ಥೆಗಳು ಸೇರಿದಂತೆ 8 ಸಂಘಟನೆಗಳನ್ನು 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶವನ್ನು ಹೊರಡಿಸಿದೆ. ಯುಪಿಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಸಂಘಟನೆಗಳನ್ನು ಸರ್ಕಾರ ಬ್ಯಾನ್​ ಮಾಡಿದೆ. ಪಿಎಫ್​ಐ ಬ್ಯಾನ್​ ಮಾಡುವಂತೆ ಹಲವು ರಾಜ್ಯಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಕಳೆದ ಸೆ.22ರಂದು ಪಿಎಫ್​ಐ ಮೇಲೆ ತನಿಖಾ ಸಂಸ್ಥೆಗಳು ನಡೆಸಿದ ದಾಳಿಯ ಬಳಿಕ ಬಂದ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಬ್ಯಾನ್​ ಮಾಡುವ ನಿರ್ಧಾರವನ್ನು ತೆಗೆದುಕೊಂಡಿದೆ.
ಇದೊಂದು ಒಳ್ಳೆ ನಿರ್ಧಾರಪಿಎಫ್ಐ ಬ್ಯಾನ್ ವಿಚಾರವಾಗಿ ಮಾತನಾಡಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ದೇಶದಲ್ಲಿ ಕೆಲ ಅಹಿತಕರ ಘಟನೆಗಳು ನಡೆಯುವ ಬಗ್ಗೆ ಮಾಹಿತಿ ಇತ್ತು. ದೊಡ್ಡ ದೊಡ್ಡ ಗಲಭೆಗಳು ನಡೆಯುವುದರ ಬಗ್ಗೆ ಮಾಹಿತಿ ಬಂದಿತ್ತು. ಇದೊಂದು ಒಳ್ಳೆ ನಿರ್ಧಾರ. ಈ ಹಿಂದೆ ಹಿಂದು ಕಾರ್ಯಕರ್ತರ ಹತ್ಯೆ ಮಾಡಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಕಾಲದಲ್ಲಿ ನಡೆದಿತ್ತು. ಪ್ಲಾನ್ ಮಾಡಿಕೊಂಡು ಹತ್ಯೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಸಾಕಷ್ಟು ಅಹಿತಕರ ಘಟನೆಗಳು ನಡೆಯುವುದರ ಬಗ್ಗೆ ಮಾಹಿತಿ ಬಂದಿತ್ತು. ಕೆಲ ಸಂಘಟನೆಗಳು ಇದರಲ್ಲಿ ಭಾಗಿಯಾಗಿರುವುದರ ಬಗ್ಗೆ ಮಾಹಿತಿ ಇತ್ತು. ಈಗ ಪಿಎಫ್ಐ ಬ್ಯಾನ್ ಮಾಡಲಾಗಿದೆ. ಇದರಿಂದ ಮುಂದೆ ನಡೆಯುತ್ತಿದ್ದಂತಹ ದೊಡ್ಡ ಅನಾಹುತಗಳಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದರು.
PFI ಬ್ಯಾನ್ ಮಾಡಿರುವುದು ಸಂತೋಷಮೈಸೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, PFI ಬ್ಯಾನ್ ಮಾಡಬೇಕೆಂದು ರಾಜ್ಯ ಸರ್ಕಾರದ ನಿರ್ಧಾರ ಇತ್ತು. ಇದೀಗ ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಇದರ ಅವಶ್ಯಕತೆ ಇತ್ತು. PFI ಬ್ಯಾನ್ ಮಾಡಿರುವುದು ಸಂತೋಷ. ಶಾಂತಿ ಸುವ್ಯವಸ್ಥೆ ಕದಡುವವರನ್ನು ಗುರುತಿಸಿ ಬಂಧಿಸಿದ್ದಾರೆ. ಅವರು ದಸರಾವನ್ನು ಟಾರ್ಗೆಟ್ ಮಾಡಿದ್ದು ಮಾಹಿತಿ‌ ಇತ್ತು. ಆ ಮಾಹಿತಿ ಆಧಾರದ ಮೇಲೆ ಕೆಲವರನ್ನು ಅರೆಸ್ಟ್ ಮಾಡಿದ್ದಾರೆ. ದಸರಾಗೆ ಯಾವುದೇ ತೊಂದರೆ ಆಗಲ್ಲ. ಕರ್ನಾಟಕ ಪೊಲೀಸ್ ಇಲಾಖೆ ಬಲವಾಗಿದೆ. ಮೈಸೂರಿನಲ್ಲಿ 4ರಿಂದ 5 ಸಾವಿರ ಪೊಲೀಸರ ನಿಯೋಜಿಸಿ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದೇವೆ ಎಂದು ಹೇಳಿದರು.
ನಾನು ಸ್ವಾಗತಿಸುತ್ತೇನೆಕೇಂದ್ರ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್​ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು ಐದು ವರ್ಷಗಳ ವರೆಗೆ UAPA ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ. ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.(ದಿಗ್ವಿಜಯ ನ್ಯೂಸ್​)
PFIಗೆ ಬಿಗ್​ ಶಾಕ್​ ಕೊಟ್ಟ ಕೇಂದ್ರ ಸರ್ಕಾರ: ಪಿಎಫ್​ಐ ಸೇರಿ 8 ಸಂಘಟನೆಗಳ ನಿಷೇಧ

ಪಿಎಫ್​ಐಗೆ ಮತ್ತೆ ಖಾಕಿ ಹೆಡೆಮುರಿ: 8 ರಾಜ್ಯಗಳಲ್ಲಿ 2ನೇ ಕಾರ್ಯಾಚರಣೆ, 247 ಸೆರೆ

ಸರಳ ವ್ಯವಸ್ಥೆಯತ್ತ ಹೆಜ್ಜೆ: ಎಸ್​ಎಸ್​ಎಲ್​ಸಿ- ಪಿಯುಸಿ ಪರೀಕ್ಷೆಗೆ ಏಕೀಕೃತ ವ್ಯವಸ್ಥೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × three =
Remember me
