ಮಂಗಳೂರು:ಬೆಳ್ಳಾರೆ ಮೂಲದ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರ್​ ಹತ್ಯೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದು, ಈ ಸಂಬಂಧ ಮಾಹಿತಿ ನೀಡಲು ದಕ್ಷಿಣ ಕನ್ನಡ ಪೊಲೀಸ್​ ವರಿಷ್ಠಾಧಿಕಾರಿ ಇಂದು ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ಕರೆದಿದ್ದಾರೆ.
ಬಂಧಿತ ಪ್ರಮುಖ ಮೂವರು ಆರೋಪಿಗಳು ಕೂಡ ಸ್ಥಳಿಯರೇ ಎಂದು ತಿಳಿದುಬಂದಿದೆ. ಹಂತಕರು ವ್ಯವಸ್ಥಿತ ಸಂಚು ರೂಪಿಸಿ ಪ್ರವೀಣ್​​ ಹತ್ಯೆ ನಡೆಸಿದ್ದಾರೆ. ಹತ್ಯೆಗೆ ಬೈಕ್ ನೀಡಿದ್ದ ಆರೋಪಿ ಸುಳ್ಯದ ಕಬೀರ್​ನನ್ನು ಆಗಸ್ಟ್​ 9ರಂದು ಬಂಧಿಸಲಾಗಿದೆ. ತನ್ನ‌ ಪರಿಚಯಸ್ಥನ ಬೈಕ್ ಪಡೆದಿದ್ದ ಕಬೀರ್​, ಅದನ್ನು ಹಂತಕರಿಗೆ ನೀಡಿದ್ದ ಎಂಬುದು ತನಿಖೆಯಲ್ಲಿ ಬಯಲಾಗಿದೆ.
ಸದ್ಯ ಪ್ರಕರಣ ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದು, ಈ ಕುರಿತ ಇನ್ನುಷ್ಟು ಮಾಹಿತಿ ಮಧ್ಯಾಹ್ನ ದಕ್ಷಿಣ ಕನ್ನಡ ಎಸ್​ಪಿ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಸಿಗಲಿದೆ. ಎ.ಡಿ.ಜಿ.ಪಿ ಅಲೋಕ್ ಕುಮಾರ್ ಸಹ ಜಿಲ್ಲೆಯಲ್ಲೇ ಮೊಕ್ಕಾಂ ಹೂಡಿದ್ದು, ಸುದ್ದಿಗೋಷ್ಠಿಯಲ್ಲಿ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಹಿನ್ನೆಲೆ ಏನು?ಜುಲೈ 26ರಂದು ರಾತ್ರಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್​ ನೆಟ್ಟಾರ್​ರನ್ನು ಬರ್ಬರವಾಗಿ ಕೊಲೆ ಮಾಡಲಾಯಿತು. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದಿದೆ. ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಮೃತ ಪ್ರವೀಣ್ ನೆಟ್ಟಾರು ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದರು.(ದಿಗ್ವಿಜಯ ನ್ಯೂಸ್​)
ಹುಡುಗಿಯರು ಲೈಂಗಿಕ ಸುಖ ಬಯಸಿದರೆ… ಶಕ್ತಿಮಾನ್​ ಖ್ಯಾತಿಯ ಮುಕೇಶ್​ ಖನ್ನಾ ಹೇಳಿಕೆಗೆ ಭಾರಿ ಆಕ್ರೋಶ!

VIDEO| ಟಾಲಿವುಡ್​ ಐಟಂ ಸಾಂಗ್​​ಗೆ ಬೋಲ್ಡ್​ ಆಗಿ ಸೊಂಟ ಬಳುಕಿಸಿದ ಚಾಹಲ್​ ಪತ್ನಿ ಧನಶ್ರೀ: ವಿಡಿಯೋ ವೈರಲ್​

ಶೋಕಿಗಾಗಿ ಬೈಕ್​ಗಳನ್ನು ಕದಿಯುತ್ತಿದ್ದ ಇಬ್ಬರು ಬಿ.ಟೆಕ್ ಸ್ಟೂಡೆಂಟ್ಸ್ ಅಂದರ್: 12 ಬುಲೆಟ್, 2 ಡ್ಯೂಕ್ ವಶಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
