ಕಲಬುರಗಿ :545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆಯು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದು, ಈ ನೇಮಕಾತಿಯಲ್ಲಿ ಕೆಲವು ಲಾಜಿಕ್​ ಇಲ್ಲದ ಅಂಕಿ-ಅಂಶಗಳನ್ನೂ ಗಮನಿಸಬಹುದಾಗಿದೆ.
ಸರ್ಕಾರ ಒಟ್ಟು 545 ಹುದ್ದೆಗಳಿಗೆ ಅರ್ಜಿ ಕರೆದಿತ್ತು. ರಾಜ್ಯಾದ್ಯಂತ ಒಟ್ಟು 92 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಯಿಂದ ಒಟ್ಟು 92 ಜನ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದು, ನೇಮಕಾತಿಯಲ್ಲಿ ಸಿಂಹಪಾಲು ಕಲಬುರಗಿ ಸಿಕ್ಕಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಇನ್ನು ಕಲಬುರಗಿ ನಗರದಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳ ಸ್ಥಾಪನೆ ಮಾಡಲಾಗಿತ್ತು. ಈ ಪೈಕಿ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರವೊಂದರಿಂದಲೇ 11 ಅಭ್ಯರ್ಥಿಗಳು ಪಿಎಸ್ಐ ಆಗಿ ಆಯ್ಕೆಯಾಗಿದ್ದಾರೆ. ಈ 11 ರಲ್ಲಿ ಏಳು ಜನ ಅಕ್ರಮವಾಗಿ ಆಯ್ಕೆಯಾಗಿ ಇದೀಗ ಸಿಐಡಿ ಕೈಗೆ ಲಾಕ್ ಆಗಿದ್ದಾರೆ.
ಇನ್ನೂ ಅಕ್ರಮದಲ್ಲಿ ಭಾಗಿಯಾದ ನಾಲ್ಕು ಜನರಿಗಾಗಿ ಸಿಐಡಿ ಶೋಧ ಕಾರ್ಯ ನಡೆಸುತ್ತಿದೆ. ನಾಲ್ಕು ಜನರಲ್ಲಿ ಓರ್ವ ಮಹಿಳಾ ಅಭ್ಯರ್ಥಿಯಿಂದಲು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಆ ಮಹಿಳಾ ಅಭ್ಯರ್ಥಿ ಹೆಸರು ಶಾಂತಾಬಾಯಿ. ಇದೀಗ ಆಕೆಗಾಗಿ ಸಿಐಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಅರೆಸ್ಟ್ ವಾರೆಂಟ್ ಜಾರಿ ಮಾಡಿದ ಬೆನ್ನಲ್ಲೇ ಶಾಂತಾಬಾಯಿ ನಾಪತ್ತೆಯಾಗಿದ್ದಾಳೆ. ಕಲಬುರಗಿ ಜಿಲ್ಲಾ ಒಂದನೇ ಹೆಚ್ಚುವರಿ ನ್ಯಾಯಾಲಯದಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.(ದಿಗ್ವಿಜಯ ನ್ಯೂಸ್​)
ಆನ್​ಲೈನ್​ನಲ್ಲಿ 1.45 ಕೋಟಿ ರೂ. ವ್ಯವಹಾರ ನಡೆಸಿದ್ದ ಸಾಮಾನ್ಯ ಮಹಿಳೆಯ ಸಾವಿನ ರಹಸ್ಯ ಕೊನೆಗೂ ಬಯಲು

ಬಹುಮಹಡಿ ಕಟ್ಟಡದಿಂದ ಕೆಳಗೆ ಬಿದ್ದು ಉಗಾಂಡ ಮೂಲದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ಕಾನ್ ಚಿತ್ರೋತ್ಸವಕ್ಕೆ ದೀಪಿಕಾ ಪಡುಕೋಣೆ; ಈ ಬಾರಿ ತೀರ್ಪುಗಾರರ ತಂಡದಲ್ಲಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
