ಬೆಂಗಳೂರು:ಪಿಎಸ್ಐ ಹುದ್ದೆಗಳಿಗೆ ನೇಮಕ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಎನ್ನಲಾದ ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ‌ ಈಗ ಆಡಳಿತ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟದ ಕೇಂದ್ರ ಬಿಂದುವಾಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ನಿಂತಿರುವ ದಿವ್ಯಾ ಹಾಗರಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಹಾಗೂ ಹಾಗರಗಿ ನಡುವಿರುವ ನಂಟಿನ ಬಗ್ಗೆ ಬಿಸಿ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣ ಹೊರಬಂದರಲ್ಲಿ‌ ಹೊಸತರಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಜತೆಗಿರುವ ಹಾಗರಗಿ ಫೋಟೋ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ‌ ಫೋಟೋ ಆಧಾರದಲ್ಲಿ ಗೃಹ ಸಚಿವರ ವಿರುದ್ಧವೂ‌ ದಾವೆ ಹೂಡಲು ಕಾಂಗ್ರೆಸ್ ಒತ್ತಾಯಿಸಿತ್ತು. ಇದೀಗ ಡಿಕೆಶಿ ಜತೆಗೆ ಹಾಗರಗಿ ಇರುವ ಫೋಟೋ ಬಯಲಾಗಿದ್ದು, ಇದನ್ನೇ ಬಳಸಿಕೊಂಡು ಬಿಜೆಪಿ ತಿರುಗೇಟು ನೀಡುವ ಸಾಧ್ಯತೆಗಳಿವೆ.

ಸಾಕಷ್ಟು ಅವಮಾನ ಎದುರಿಸಿ 3 ವರ್ಷದಿಂದ ಕೂದಲು ಬೆಳೆಸ್ತಿರೋ ಬಾಲಕನ ಬಗ್ಗೆ ತಿಳಿದ್ರೆ ಶಹಭಾಸ್​ ಅಂತೀರಾ…

ಪುಷ್ಪ ಸಿನಿಮಾ ಮಾದರಿಯಲ್ಲೇ ಗಂಡನ ಕತ್ತು ಸೀಳಿದ ಪತ್ನಿಯ ಹೇಳಿಕೆ ಕೇಳಿ ಶಾಕ್​ ಆದ ಪೊಲೀಸರು!

ತಲೆಗೆ ಮುತ್ತಿಟ್ಟು ಅತಿರೇಕ ವರ್ತನೆ ತೋರಿದ ಕೃನಾಲ್​ ವಿರುದ್ಧ ಟೀಕಾ ಪ್ರಹಾರ ನಡೆಸಿದ ಹಿರಿಯ ಆಟಗಾರರು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × two =
Remember me
