ಕಲಬುರಗಿ:ರಾಜ್ಯದಲ್ಲಿ ನಡೆದಿದೆ ಎನ್ನಲಾದ 545 ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಆಕೆಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಂದಹಾಗೆ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾದ್ಯಮ ಶಾಲೆಯ ಒಡತಿ. ಪಿಎಸ್ಐ ನೇಮಕಾತಿ ಅಕ್ರಮ ಬಯಲಾಗುತ್ತಿದ್ದಂತೆ ಪರಾರಿಯಾಗಿದ್ದಳು. ದಿವ್ಯಾ ಮಹಾರಾಷ್ಟ್ರ ಬಿಟ್ಟು ಬೇರೆಲ್ಲು ತೆರಳಿರಲಿಲ್ಲ. ಮಹಾರಾಷ್ಟ್ರದಲ್ಲೇ ದಿನಕ್ಕೊಂದು ಪ್ಲೇಸ್ ಬದಲಿಸ್ತಿದ್ದರು. ಈ ಬಗ್ಗೆ ದಿಗ್ವಿಜಯ ನ್ಯೂಸ್​ ಸಹ ನಿಖರ ಮಾಹಿತಿಯನ್ನು ಬಿತ್ತರಿಸಿತ್ತು.
ದಿವ್ಯಾ ಅವರಿಗಾಗಿ ಸಿಐಡಿ ತಂಡ ಎಲ್ಲಾ ಕಡೆ ಹುಡುಕಾಟ ನಡೆಸುತ್ತಿತ್ತು. ಸಾಕಷ್ಟು ದಿನಗಳವರೆಗೆ ಪತ್ತೆಯಾಗದ ಹಿನ್ನೆಲೆಯಲ್ಲಿ ದಿವ್ಯಾ ಹಾಗರಗಿ ಸೇರಿ ಆರು ಆರೋಪಿಗಳಿಗೆ ಅರೆಸ್ಟ್ ವಾರಂಟ್ ಜಾರಿಯಾಗಿತ್ತು. ಆರೋಪಿಗಳಾದ ದಿವ್ಯಾ ಹಾಗರಗಿ, ಮಂಜುನಾಥ್, ಕಾಶೀನಾಥ್, ರವೀಂದ್ರ, ಶಾಂತಿಬಾಯಿ, ಅರ್ಚನಾ ಅವರನ್ನು ಬಂಧಿಸುವಂತೆ ಕಲಬುರಗಿಯ ಮೂರನೇ ಜೆಎಂಎಫ್​ಸಿ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿಗೊಳಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಇಂಡೋನೇಷ್ಯಾ ತಾಳೆಎಣ್ಣೆ ರಫ್ತು ನಿಷೇಧ ಜಾರಿಗೆ

ಯಾರ ಮೇಲೂ ಹಿಂದಿ ಹೇರುವುದಿಲ್ಲ…

ಒಮಿಕ್ರಾನ್ ಉಪತಳಿ ಹೆಚ್ಚು ಅಪಾಯಕಾರಿ; ಪಟನಾದಲ್ಲಿ ಬಿಎ.12 ಸೋಂಕು ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
