ಬೆಂಗಳೂರು:ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದರು.
ಮೂವರನ್ನು ರಾಜ್ಯಸಭೆಗೆ ಕಳುಹಿಸುವಲ್ಲಿ ತಾವು ಪಟ್ಟ ಪ್ರಯತ್ನ ಅಮೂಲ್ಯವಾದದ್ದು ಕರ್ನಾಟಕ ರಾಜ್ಯದ ಈ ಕೊಡುಗೆ ಇನ್ನಷ್ಟು ಅತ್ಯುತ್ತಮವಾಗಿ ಕೆಲಸ ಮಾಡುವಂತಾಗಲಿ ಎಂದು ಪ್ರಧಾನಿ ಮೋದಿಯವರು ಬೊಮ್ಮಾಯಿ ಅವರನ್ನು ಪ್ರೋತ್ಸಾಹಿಸಿ, ಶ್ಲಾಘಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು. ನೀವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕವಾಗಿದೆ. ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ಅವರು ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಮುಖ್ಯ ಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಜಯಗಳಿಸಿದ್ದಕ್ಕಾಗಿ ಸಂತಸ ವ್ಯಕ್ತಪಡಿಸಿದರು. ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳ ಗೆಲುವನ್ನು ಖಾತ್ರಿ ಪಡಿಸಿದ್ದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳ್ಳಂಬೆಳಗ್ಗೆ ಮಂಗಳೂರಿನಲ್ಲಿ ಮೊಳಗಿದ ಗುಂಡಿನ ಸದ್ದು: ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡೇಟು

ಮದ್ವೆಯಾದ ಮಾರನೇ ದಿನವೇ ಭಾರಿ ಎಡವಟ್ಟು ಮಾಡಿಕೊಂಡು ವಿವಾದಕ್ಕೆ ಗುರಿಯಾದ ನಯನತಾರಾ!

ನಾನು ಲೈಂಗಿಕ ವ್ಯಸನಿಯಂತೆ! ಧನುಷ್​, ಬೈಲ್ವಾನ್​ ರಂಗನಾಥನ್​ ವಿರುದ್ಧ ದೂರು ದಾಖಲಿಸಿದ ಗಾಯಕಿ ಸುಚಿತ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
