ರಾಮನಗರ:ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯ ನಾಪತ್ತೆಯಾಗಿರುವ ಘಟನೆ ಕನಕಪುರದ ಮಾವತ್ತೂರು ಕೆರೆಯಲ್ಲಿ ನಡೆದಿದೆ.
ಸಚಿನ್ ಕುಮಾರ್(26) ನಾಪತ್ತೆಯಾದ ವೈದ್ಯ. ಕನಕಪುರದ ದಯಾನಂದ ಸಾಗರ ಮೆಡಿಕಲ್ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಚಿನ್​, ನಿನ್ನೆ (ಸೆ.13) ಸಂಜೆ ಸ್ನೇಹಿತರ ಜೊತೆಗೆ ಕೆರೆ ಬಳಿ ತೆರಳಿದ್ದರು. ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸ್ನೇಹಿತರಿಂದ ಬಂದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಎಲೆಕ್ಟ್ರಿಕ್​ ಸ್ಕೂಟರ್​ ಶೋರೂಮ್​ನಲ್ಲಿ ಅಗ್ನಿ ಅವಘಡ: 8 ಮಂದಿ ಸಾವು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿತ

PHOTOS| ಬಿಕಿನಿ ಧರಿಸಿ ಮಾಲ್ಡೀವ್ಸ್​ ಕಡಲ ಕಿನಾರೆಯಲ್ಲಿ ಕ್ಯಾಮೆರಾಗೆ ಪೋಸ್​ ನೀಡಿದ ನಟಿ ಪ್ರಣೀತಾ

ಮರೆಯಾದ ಮಾನವೀಯತೆ: ಯುವಕ ನೇಣು ಹಾಕಿಕೊಳ್ಳುವುದನ್ನು ತಡೆಯದೇ ವಿಡಿಯೋ ಮಾಡಿದ ಭೂಪರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
