ಹಾವೇರಿ:ಬಿಜೆಪಿ ಟಿಕೆಟ್ ವಂಚಿತ ಆರ್. ಶಂಕರ್ ಸದಿಲ್ಲದೇ ನ್ಯಾಷನಲ್ ಕಾಂಗ್ರೆಸ್ ಪಕ್ಷ (ಎನ್​ಸಿಪಿ) ಸೇರಿದ್ದಾರೆ. ಇಂದು ಬೆಳಗ್ಗೆ ತಮ್ಮ‌ ಮನೆಗೆ ಬಂದ ಬೆಂಬಲಿಗರಿಗೆ ಎನ್​ಸಿಪಿ ಧ್ವಜ, ಶಾಲು ನೀಡಿದ ಸ್ವಾಗತಿಸಿದ ಬಳಿಕ ಶಂಕರ್​ ಪಕ್ಷ ಸೇರ್ಪಡೆಯಾಗಿರುವ ಗುಟ್ಟು ಬಹಿರಂಗವಾಗಿದೆ.
ಇದನ್ನೂ ಓದಿ:ಕಳೆದ 6 ವರ್ಷಗಳಲ್ಲಿ 10,933 ಎನ್​ಕೌಂಟರ್​! ಕ್ರಿಮಿನಲ್​ಗಳ ವಿರುದ್ಧ ಯೋಗಿ ಸರ್ಕಾರ ಕ್ರಮ
ಆರ್.ಶಂಕರ್​ ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಬಿಜೆಪಿ ಶಂಕರ್​ಗೆ ಟಿಕೆಟ್ ನೀಡಿರಲಿಲ್ಲ. ಇದು ಅವರ ಅಸಮಾಧಾನಕ್ಕೂ ಕಾರಣವಾಗಿತ್ತು. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಶಂಕರ್ 2018ರಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಬಿಜೆಪಿಗೆ ಬೆಂಬಲ ಸೂಚಿಸಿದ್ದರಿಂದ ಶಂಕರ್ ಕಾಂಗ್ರೆಸ್​ನಿಂದ ಅನರ್ಹಗೊಂಡಿದ್ದರು.
ಇದನ್ನೂ ಓದಿ:ಕಾಂಗ್ರೆಸ್​-ಬಿಜೆಪಿ ಉತ್ತರ-ದಕ್ಷಿಣ ಗುರಿ; ಹೆಚ್ಚು ಸ್ಥಾನಕ್ಕೆ ಎರಡೂ ಪಕ್ಷಗಳಿಂದ ಸ್ಪಷ್ಟ ಲೆಕ್ಕಾಚಾರ
ಇದೀಗ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಎನ್​ಸಿಪಿ ಪಕ್ಷಕ್ಕೆ ಆರ್​.ಶಂಕರ್ ಸೇರ್ಪಡೆ ಆಗಿದ್ದಾರೆ. 2018ರಲ್ಲಿ ಕರ್ನಾಟಕ ಪ್ರಜಾಕೀಯ ಜನತಾ ಪಕ್ಷ (ಕೆಪಿಜೆಪಿ) ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎನ್​​ಸಿಪಿಯಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 10 =
Remember me
