ಬೆಂಗಳೂರು/ಶಿವಮೊಗ್ಗ:ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಮನೆಗೆ ಇಂದು (ಮಾ.6) ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ವತಿಯಿಂದ ನೀಡಲಾದ 25 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
ಚೆಕ್​ ಹಸ್ತಾಂತರ ಮಾಡುವುದಕ್ಕೂ ಮುನ್ನ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪ, ಸಂಸದರಾದ ಶ್ರೀ ಬಿ. ವೈ. ರಾಘವೇಂದ್ರ ಮತ್ತು ಪ್ರಮುಖರು ಉಪಸ್ಥಿತರಿದ್ದರು.
–BJP KARNATAKA (@BJP4Karnataka)6 Mar 2022

ಫೆಬ್ರವರಿ 20ರ ರಾತ್ರಿ ಹರ್ಷನನ್ನು ಭೀಕರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು ಬಳಿಕ ಕಾರಿನಲ್ಲಿ ಎಸ್ಕೇಪ್​ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಎರಡನೇ ಜೆಎಂಎಫ್​ಸಿ ನ್ಯಾಯಾಧೀಶರಾದ ಶ್ರೀಮತಿ ಸಮ್ಮತಿರವರು, ಮಾರ್ಚ್ 7ರ ತನಕ ಆರೋಪಿಗಳನ್ನು ಪೊಲೀಸರ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಇನ್ನೂ ಹೆಚ್ಚಿನ ವಿಚಾರಣೆ ನಡೆಸಬೇಕಾಗಿದೆ. ಹೀಗಾಗಿ 15 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಮಾರ್ಚ್​ 7ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಕೋರ್ಟ್‌ ಆದೇಶಕ್ಕಿಲ್ಲ ಕಿಮ್ಮತ್ತು: ಮಂಗಳೂರಿನ 2 ಕಾಲೇಜುಗಳಿಗೆ ರಜೆ- ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಡೋಲಾಯಮಾನ

ಶಿಕ್ಷಕರ ವಿರುದ್ಧ ಠಾಣೆಯ ಮೆಟ್ಟಿಲೇರಿದ 3ನೇ ಕ್ಲಾಸ್​ ವಿದ್ಯಾರ್ಥಿ: ಬಾಲಕನ ಮಾತು ಕೇಳಿ ಪೊಲೀಸರೇ ಶಾಕ್​!

RRR ಅಡ್ವಾನ್ಸ್ ಟಿಕೆಟ್ ಬುಕಿಂಗ್ ಶುರು: ವಿದೇಶದಲ್ಲಿ ಜ್ಯೂ.ಎನ್​ಟಿಆರ್ ಫ್ಯಾನ್ಸ್ ಅಬ್ಬರ ಹೇಗಿದೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − seven =
Remember me
