ಮೈಸೂರು:ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ಹೆಸರು ಸೂಚಿಸಿರುವುದು ಬಿ.ಎಸ್​. ಯಡಿಯೂರಪ್ಪ. ಈ ಕಾರಣದಿಂದ ಸರ್ಕಾರದ ಮೇಲೆ ಯಡಿಯೂರಪ್ಪ ಸಹಜವಾಗಿ ಹಿಡಿತ ಹೊಂದಿರುತ್ತಾರೆ. ಹೀಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವೇ? ಆದರೆ, ಈ ಕ್ಷಣದಲ್ಲೇ ನಾನು ಬೊಮ್ಮಯಿ ಬಗ್ಗೆ ಏನೂ ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಮುಖ್ಯಮಂತ್ರಿ ಬದಲಾದರೆ ಎಲ್ಲವೂ ಬದಲಾಗುತ್ತಾ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಇಳಿದಿದ್ದಾರೆ, ಬೊಮ್ಮಾಯಿ ಸಿಎಂ ಆಗಿದ್ದಾರೆ ಅಂದ ಮಾತ್ರಕ್ಕೆ ಬಿಜೆಪಿಯ ಐಡಿಯಾಲಜಿ ಬದಲಾಗುತ್ತಾ? ಕೋಮುವಾದ ಹೊರಟು ಹೋಗುತ್ತಾ? ಹಿಂದುತ್ವದ ಅವರ ಅಜೆಂಡಾ ಬದಲಾಗುತ್ತಾ? ಬಿಜೆಪಿಯವರು ಯಾವತ್ತಿಗೂ ಅಲ್ಪಸಂಖ್ಯಾತರು, ದಲಿತರು, ಬಡವರ ಪರವಾಗಿ ಇಲ್ಲ. ಆದ್ದರಿಂದ ಬಿಜೆಪಿ ಸರ್ಕಾರದಿಂದ ಯಾವುದೇ ನೀರೀಕ್ಷೆ ಮಾಡೋದಿಲ್ಲ. ಆದರೆ, ಬಸವರಾಜ ಬೊಮ್ಮಾಯಿಗೆ ಒಂದು ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಒಳ್ಳೆಯ ಆಡಳಿತ ನೀಡಲಿ ಎಂದು ಸಲಹೆ ನೀಡಿದರು.
ಎಸ್.ಆರ್. ಬೊಮ್ಮಾಯಿ ಅವರ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಗಾಂಧಿ ಮಗ ಕುಡುಕನಾದ. ಗಾಂಧಿಯ ಮಗ ಮಹಾತ್ಮ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದರು.
ಸೂಪರ್ ಸಿಎಂ ಎಂಬ ಆರೋಪದಿಂದ ಮುಕ್ತನಾದೆ ಎಂಬ ವಿಜಯೇಂದ್ರ ಹೇಳಿಕೆಗೆ ಹಾಗಾದ್ರೆ ಸೂಪರ್ ಸಿಎಂ ಆಗಿದ್ದೆ ಅಂತನಾ ಅವರ ಮಾತಿನ ಅರ್ಥ? ಅದನ್ನು ಅವರೇ ಒಪ್ಪಿಕೊಂಡಂತೆ ಅಲ್ವಾ? ಸಿಎಂ ಆಯ್ಕೆಯಲ್ಲಿ ಯಾರ ಕೈ ಮೇಲಾಗಿದೆ? ಇನ್ನೂ ಮೂರು ತಿಂಗಳ ಏನು ಮಾತನಾಡಲ್ಲ, ಕಾದು ನೋಡೋಣ ಎಂದು ಸಿದ್ದರಾಮಯ್ಯ ತಿಳಿಸಿದರು.(ದಿಗ್ವಿಜಯ ನ್ಯೂಸ್​)
ಆಗಸ್ಟ್​ 31ರವರೆಗೆ ಕೋವಿಡ್​ ಮಾರ್ಗಸೂಚಿ ವಿಸ್ತರಿಸಿದ ಕೇಂದ್ರ ಸರ್ಕಾರ: ಕಠಿಣ ಕ್ರಮಕ್ಕೆ ರಾಜ್ಯಗಳಿಗೆ ಸೂಚನೆ

ಐಸಿಸಿ ಟಿ-ಟ್ವೆಂಟಿ ರ್ಯಾಂಕಿಂಗ್: ಅಗ್ರ 10ರೊಳಗೆ ಸ್ಥಾನ ಉಳಿಸಿಕೊಂಡ ಕೊಹ್ಲಿ, ರಾಹುಲ್

‘ಪ್ರಧಾನಿ ಸ್ಥಾನಕ್ಕೆ ಮಮತಾ ಬ್ಯಾನರ್ಜಿಯವರೇ ಬೆಸ್ಟ್!’ ದೀದಿಯನ್ನು ಹಾಡಿ ಹೊಗಳಿದ ಸಂಸದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
