ದಾವಣಗೆರೆ:ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಬೆಣ್ಣೆ ನಗರಿಯಲ್ಲಿಂದು ನಡೆಯುತ್ತಿರುವ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಸಿದ್ದು ಅಭಿಮಾನಿಗಳು ಹಾಗು ಕಾಂಗ್ರೆಸ್​ ಕಾರ್ಯಕರ್ತರಿಗೆ ಭರ್ಜರಿ ಊಟದ ವ್ಯವಸ್ಥೆ ಮಾಡಲಾಗಿದೆ.
ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಎರಡು ಕಡೆ ಊಟಕ್ಕಾಗಿ ವ್ಯವಸ್ಥೆ ಮಾಡಲಾಗಿದೆ. ಬಿಸಿಬೇಳೆ ಬಾತ್​​, ಪಲಾವ್​, ಮೊಸರನ್ನ, ಮೈಸೂರು ಪಾಕ್ ಹಾಗೂ ‌ಲಾಡು ತಿನಿಸುಗಳು ಊಟದ ಮೆನುವಿನಲ್ಲಿದೆ. ಸುಮಾರು ಐದು ಲಕ್ಷ ಜನರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಬೆಂಗಳೂರಿನಿಂದ ಬಂದ 2500 ಬಾಣಸಿಗರು ಊಟ ತಯಾರಿ ಮಾಡಿದ್ದಾರೆ.
20 ಕ್ವಿಂಟಲ್ ಲಾಡು ಹಾಗೂ 6 ಲಕ್ಷ ಮೈಸೂರು ಪಾಕ್ ಮಾಡಲಾಗಿದೆ. ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದ್ದು, ವಿವಿಧ ಜಿಲ್ಲೆಗಳಿಂದ ಬರುವ ಬೆಂಬಲಿಗರಿಗೆ ಇನ್ನೊಂದು ಕಡೆ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲ ಆಹಾರ ಸಾಮಗ್ರಿಗಳನ್ನು ಟನ್ ಲೆಕ್ಕದಲ್ಲೇ ತರಲಾಗಿದೆ.(ದಿಗ್ವಿಜಯ ನ್ಯೂಸ್​)
ಭಾರಿ ಮಳೆಗೆ ಐತಿಹಾಸಿಕ‌‌ ಶ್ರವಣಬೆಳಗೊಳ‌ ಬೆಟ್ಟದಲ್ಲಿ ಉರುಳಿ ಬಿದ್ದ ಬೃಹತ್ ಬಂಡೆಗಳು: ತಪ್ಪಲಿನ ಜನರಲ್ಲಿ ಆತಂಕ

ಸಿದ್ದರಾಮೋತ್ಸವ: ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿಮೀ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

PHOTOS| ಆಶು ರೆಡ್ಡಿ ಹಾಟ್​ ಲುಕ್​: ಜೂನಿಯರ್​ ಸಮಂತಾರ ಬಿಕಿನಿ ಅವತಾರಕ್ಕೆ ಅಭಿಮಾನಿಗಳು ಫಿದಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
