ದಾವಣಗೆರೆ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ಹುಟ್ಟುಹಬ್ಬ ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಿಂದಾಗಿ ವಾಹನ ಸವಾರರಿಗೆ ಟ್ರಾಫಿಕ್ ಜಾಮ್​​ ಕಿರಿಕಿರಿ ಉಂಟಾಗಿದೆ.
ದಾವಣಗೆರೆಗೆ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ 15 ಕಿಮೀ ಜಾಮ್ ಆಗಿದೆ. ನಿಂತ ಜಾಗದಲ್ಲೇ ವಾಹನಗಳು ನಿಂತಿದ್ದು, ಸವಾರರು ಪರದಾಡುವಂತಾಗಿದೆ.
ರಾಷ್ಟ್ರೀಯ ಹೆದ್ದಾರಿ ಮಾತ್ರವಲ್ಲದೆ, ದಾವಣಗೆರೆ ನಗರದ ಮಧ್ಯಾಭಾಗ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣದ ಬಳಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಜ್ಯದ ವಿವಿಧ ಭಾಗದಿಂದ ಕಾರ್ಯಕ್ರಮಕ್ಕೆ ಬರುತ್ತಿರುವ ವಾಹನಗಳು ದಾವಣಗೆರೆ ನಗರದ ಮೂಲಕ ಆಗಮಿಸಿದ್ದರಿಂದ ಹಾಗೂ ನಗರದ ಹೋಟೆಲ್‌ಗಳಲ್ಲಿ ಉಳಿದಿದ್ದವರು ಒಂದೇ ಸಮಯಕ್ಕೆ ಕಾರ್ಯಕ್ರಮಕ್ಕೆ ಹೊರಟಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಟ್ರಾಫಿಕ್​ ಜಾಮ್​ನಿಂದ ದಾವಣಗೆರೆಯಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಟ್ರಾಫಿಕ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಆದರೂ, ಟ್ರಾಫಿಕ್​ ಮಾತ್ರ ಇನ್ನು ನಿಯಂತ್ರಣಕ್ಕೆ ಬಂದಿಲ್ಲ.(ದಿಗ್ವಿಜಯ ನ್ಯೂಸ್​)
75ನೇ ವಸಂತಕ್ಕೆ ಕಾಲಿಟ್ಟ ಮಾಜಿ ಸಿಎಂ ಸಿದ್ದು: ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಹುಟ್ಟುಹಬ್ಬ ಆಚರಣೆ​

ಅಮೆರಿಕ ಸ್ಪೀಕರ್ ಭೇಟಿಗೆ ಕೆರಳಿದ ಚೀನಾ: ತೈವಾನ್​ ವಾಯುರಕ್ಷಣಾ ವಲಯಕ್ಕೆ 21 ಯುದ್ಧ ವಿಮಾನ ಎಂಟ್ರಿ

ಮತಯಂತ್ರ ಹ್ಯಾಕ್​ ಎಚ್ಚರಿಕೆ: ಮುಂದಿನ ಬ್ರಿಟನ್​ ಪ್ರಧಾನಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ವಿಳಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
