ಮೈಸೂರು:ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಷ್ ವಿರೋಧಿಗಳಿಗೆ ತಿರುಗೇಟು ನೀಡಿದರು.​
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುಮಲತಾ ಅವರು ನಾನು ಮಾಡಿರುವುದನ್ನು ಇಲ್ಲ ಅಂದಾಗ ನನ್ನಿಂದ ಸುಮ್ಮನಿರಲು ಸಾಧ್ಯವಿಲ್ಲ. ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಕೆಲಸ ಮಾಡಲ್ಲ. ನಿಜ ಹೇಳಲು ನಿಮಗೆ ಭಯ ಏಕೆ? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ತಮ್ಮ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದರು.
ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸವನ್ನು ಮಾಡಿಲ್ಲ ಅಂತಾ ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ, ಜನ ನನ್ನ ಪರ ಮಾತನಾಡುತ್ತಾರೆ ಅನ್ನುವ ಭಯ ಶುರುವಾಗಿ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಿನಿಮಾ ಬಗ್ಗೆ ಮಾತನಾಡಿದ ಸುಮಲತಾ, ರಾಜಕೀಯ ಒತ್ತಡದಲ್ಲಿ ಸಿನಿಮಾರಂಗವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೂ ಒತ್ತಡದ ನಡುವೆಯೂ ಈ ವರ್ಷ ಒಂದು ಸಿನಿಮಾದಲ್ಲಿ ನಟನೆ ಮಾಡಿದ್ದೇನೆಂದು ಸುಮಲತಾ ಹೇಳಿದರು. ಅಲ್ಲದೆ, ಚಿತ್ರರಂಗ ನನ್ನ ಕುಟುಂಬ ಇದ್ದಂತೆ. ಚಿತ್ರರಂಗ ನನಗೆ ಎಲ್ಲವನ್ನೂ‌ ನೀಡಿದೆ. ಅಲ್ಲಿ ಉತ್ತಮ ನೆನಪುಗಳಿವೆ. ಯಾವತ್ತು ನಾನು ಚಿತ್ರರಂಗದ ಜತೆ ಇರುತ್ತೇನೆ ಎಂದರು.
ರಷ್ಯಾ- ಯೂಕ್ರೇನ್ ಯುದ್ಧ ವಿಚಾರವಾಗಿ ಪ್ರತಿಕ್ರಿಯಿಸಿ, ಅಲ್ಲಿನ ಪರಿಸ್ಥಿತಿ ಅರ್ಥ ಮಾಡಿಕೊಂಡ ಮಾತನಾಡಬೇಕು. ವಿದೇಶಾಂಗ ಇಲಾಖೆ ಯಾವ ರೀತಿ ಕೆಲಸ ಮಾಡುತ್ತಿದೆ ಅನ್ನೋದು ಗೊತ್ತಿದೆ. ಕೇಂದ್ರ ಖಂಡಿತ ಪ್ರಾಮಾಣಿಕ‌ವಾದ ಪ್ರಯತ್ನ ಮಾಡಿದೆ. ಬಹುತೇಕ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರಲಾಗಿದೆ. ಪ್ರತಿ ವಿಷಯವನ್ನು ರಾಜಕೀಯ ಮಾಡಬಾರದು. ಅಲ್ಲಿ ಯುದ್ದ ನಡೆಯುತ್ತಿದೆ. ಅಲ್ಲಿಂದ ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾ‌ನ ಇಳಿಸಲು ಸಾಧ್ಯವಿಲ್ಲ. ಎಲ್ಲರನ್ನೂ ಕರೆದುಕೊಂಡು ಬಂದಿದ್ದು ಅದ್ಭುತ ಕೆಲಸ ಎಂದು ಸುಮಲತಾ ಅವರು ಕೇಂದ್ರಕ್ಕೆ ಪುಲ್ ಕ್ರೆಡಿಟ್ ನೀಡಿದರು.(ದಿಗ್ವಿಜಯ ನ್ಯೂಸ್​)
ಅತ್ತೆಯ ಅಕ್ರಮ ಸಂಬಂಧ ಬಯಲು ಮಾಡಿದ ಸೊಸೆಗೆ ಭಾನುವಾರ ರಾತ್ರಿ ಕಾದಿತ್ತು ಬಿಗ್​ ಶಾಕ್​..!

ಖಂಡಿತ ಮದುವೆ ಆಗ್ತಾನೆ! ಪ್ರಭಾಸ್ ಬಗ್ಗೆ​ ಯಾರಿಗೂ ತಿಳಿಯದ ರಹಸ್ಯವೊಂದನ್ನು ಬಿಚ್ಚಿಟ್ಟ ಅವರ ದೊಡ್ಡಮ್ಮ

ಯುದ್ಧ ಪೀಡಿತ ಯೂಕ್ರೇನ್​ನಿಂದ ಸುರಕ್ಷಿತ ಸ್ಥಳಾಂತರ: ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ ಪಾಕ್​ ಯುವತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − 6 =
Remember me
