ತುಮಕೂರು:ದಲಿತ ಸಮುದಾಯದ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಘಟನೆ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಭೈರೇನಾಹಳ್ಳಿ ಗ್ರಾಮದಲ್ಲಿ ಗುರುವಾರ (ಫೆ.03) ನಡೆದಿದೆ.
ಹನುಮಂತರಾಯಪ್ಪ (57) ಎಂಬುವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಗ್ರಾಮದ ಹೊರವಲಯ ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರಕ್ಕೆ ಕುಟುಂಬ ಮುಂದಾಗಿತ್ತು. ದಲಿತ ಸಮುದಾಯದವರು ಮೊದಲಿನಿಂದಲೂ ಅದೇ ಜಾಗದಲ್ಲಿ ಅಂತ್ಯಸಂಸ್ಕಾರ ನಡೆಸುತ್ತಿದ್ದರು. ಭೈರನಹಳ್ಳಿ ಗ್ರಾಮದ ಸರ್ವೇ ನಂಬರ್‌ 1ರಲ್ಲಿ 39 ಗುಂಟೆ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಯುತ್ತಿತ್ತು.
ಇದೀಗ ಅಂತ್ಯಸಂಸ್ಕಾರಕ್ಕೆ ಕೈವಾರ ತಾತಯ್ಯ ಟ್ರಸ್ಟ್​ನವರು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸರ್ಕಾರಿ ಜಾಗದಲ್ಲಿ ಕೈವಾರ ತಾತಯ್ಯ ದೇವಸ್ಥಾನ ನಿರ್ಮಾಣಕ್ಕೆ ಗ್ರಾಮದ ಕೆಲ ಜನರು ಮುಂದಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೆಲ ಜನರಿಂದ ಅಂತ್ಯಸಂಸ್ಕಾರಕ್ಕೆ ಅಡ್ಡಿಯಾಗಿದೆ.
ವಿವಾದ ತಿಳಿದ ಬೆನ್ನಲ್ಲೇ ಸ್ಥಳಕ್ಕೇ ಆಗಮಿಸಿದ ತಹಸೀಲ್ದಾರ್‌ ನಹೀದಾ ಝಂ, ದಲಿತ ಕುಟುಂಬದವರನ್ನು ಮನವೊಲಿಸಿ, ಬದಲಿ ಜಾಗವನ್ನು ಗುರುತಿಸಿ, ಅಂತ್ಯಸಂಸ್ಕಾರಕ್ಕೆ ಅನುವು ಮಾಡಿಕೊಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.(ದಿಗ್ವಿಜಯ ನ್ಯೂಸ್​)
ತಮ್ಮ ಮೊದಲ ಮನೆ ಮಾರಾಟ ಮಾಡಿದ ಅಮಿತಾಭ್​ ಬಚ್ಚನ್​ಗೆ ಸಿಕ್ಕ ಹಣದ ಮೊತ್ತ ಕೇಳಿದ್ರೆ ದಂಗಾಗ್ತಿರಾ..!

ನಿರ್ಮಾಣ ಹಂತದ ಕಟ್ಟಡ ಕುಸಿದು ಐವರು ದುರಂತ ಸಾವು: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಕರೊನಾ 3ನೇ ಅಲೆಯ ಉತ್ತುಂಗ ಅಂತ್ಯ – ಪಾಸಿಟಿವಿಟಿ ಇಳಿಕೆ : ಆರೋಗ್ಯ ಸಚಿವಾಲಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + seven =
Remember me
