ತುಮಕೂರು:ಲಾರಿ ಮತ್ತು ಕ್ರೂಸರ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, 4ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳದ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ (ಆ.25) ಬೆಳ್ಳಂಬೆಳಗ್ಗೆ ನಡೆದಿದೆ.
ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕ್ರೂಸರ್ ಹಾಗೂ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಹಾಗೂ ಶಿರಾ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೂಲಿ ಕೆಲಸಕ್ಕೆಂದು ಕಾರ್ಮಿಕರು ಕ್ರೂಸರ್​ ವಾಹನದಲ್ಲಿ ಬೆಂಗಳೂರಿಗೆ ಬರುತ್ತಿದ್ದರು. 20 ಜನ ಕ್ರೂಸರ್ ವಾಹನದಲ್ಲಿದ್ರು. ಲಾರಿ ಓವರ್ ಟೇಕ್ ಮಾಡಲು ಹೋಗಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 9 ಜನ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 4.30 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಅದೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ಭಾರತದ ಚೌಕಿ ಮೇಲಿನ ದಾಳಿಗೆ 30 ಸಾವಿರ ರೂ. ಇನಾಮು: ಬಂಧಿತ ಉಗ್ರ ಬಿಚ್ಚಿಟ್ಟ ಭಯಾನಕ ರಹಸ್ಯವಿದು

ಕಮಿಷನ್​ಗೆ ಸರ್ಕಾರ ಕೌಂಟರ್: ಲೋಕಾಯುಕ್ತಕ್ಕೆ ದೂರು ಕೊಡಲು ಮುಖ್ಯಮಂತ್ರಿ ಬೊಮ್ಮಾಯಿ ಸವಾಲು

ರಾಷ್ಟ್ರಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಸಿನಿಮಾ ವೀಕ್ಷಿಸಿದ ಸಿದ್ಧರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
