ತುಮಕೂರು:ಹೋಟೆಲ್​ ನಡೆಸುತ್ತಿದ್ದ ಮಹಿಳೆಯ ಮೇಲೆ ಪೊಲೀಸ್​ ಕಾನ್ಸ್​ಟೇಬಲ್​ ಓರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆತಂಕಕಾರಿ ಘಟನೆ ಬುಧವಾರ (ಜೂನ್​29) ಬೆಳಗ್ಗೆ 10 ಗಂಟೆಗೆ ಕಿಬ್ಬನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಎಚ್​.ಎನ್​. ಮಂಜುನಾಥ್ (ಮಿಲ್ಟ್ರಿ) ಅತ್ಯಾಚಾರಕ್ಕೆ ಯತ್ನಿಸಿದ ಪೇದೆ. ಈತ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾನ್ಸ್​ಟೇಬಲ್​ ಆಗಿ ಸೇವೆ ಸಲ್ಲಿಸುತ್ತಿದ್ದ. ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಬಂಧಿಸಲಾಗಿದ್ದು, ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಿಬ್ಬನಹಳ್ಳಿ ಪೊಲೀಸರು ಕಳುಹಿಸಿದ್ದಾರೆ. ಮಂಜುನಾಥ್​ ಈ ಹಿಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾನೆ. ಆರ್ಮಿ ಕೆಲಸ ಬಿಟ್ಟು, ಕಾನ್ಸ್​ಟೇಬಲ್​ ಆಗಿದ್ದ.
ಘಟನೆಯ ವಿವರಣೆಗೆ ಬರುವುದಾದರೆ, ಸಂತ್ರಸ್ತ‌ ಮಹಿಳೆ ಕಿಬ್ಬನಹಳ್ಳಿಯಲ್ಲಿ ಹೋಟೆಲ್​ ನಡೆಸಿಕೊಂಡಿದ್ದಾರೆ. ಬುಧವಾರ (ಜೂನ್​29) ಬೆಳಗ್ಗೆ ಮಹಿಳೆಯ ಗಂಡ ಹೋಟೆಲ್​ಗೆ ಪದಾರ್ಥಗಳನ್ನು ತರಲೆಂದು ತಿಪಟೂರಿಗೆ ಹೋದರು. ಈ ವೇಳೆ ತಿಂಡಿ‌ ತಿನ್ನುವ ನೆಪದಲ್ಲಿ ಹೋಟೆಲ್ ಬಳಿ ಬಂದಿದ್ದ ಆರೋಪಿ ಮಂಜುನಾಥ್, ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಸಹಕರಿಸದೇ ಹೋದರೆ, ಹೋಟೆಲ್ ಬಂದ್ ಮಾಡಿಸುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ. ಮಹಿಳೆ ಯಾವುದಕ್ಕೂ ಜಗ್ಗದಿದ್ದಾಗ ಕೊಲೆ ಬೆದರಿಕೆಯನ್ನು ಹಾಕಿದ್ದಾನೆ. ಇದಾದ ಕೂಡಲೇ ಮಹಿಳೆ ತನ್ನ ಪತಿಗೆ ಕರೆ ಮಾಡಿ ಎಲ್ಲವನ್ನು ತಿಳಿಸಿದ್ದಾಳೆ. ತಕ್ಷಣ ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಸಂತ್ರಸ್ತೆಯ ಪತಿ ದೂರು ದಾಖಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 354(ಎ), 354(ಬಿ), 448, 506, 509, ಹಾಗೂ SC, ST ಕಾಯ್ದೆ ಅಡಿ ಎಫ್ಐಆರ್ ದಾಖಲಿಸಿಕೊಳ್ಳಲಾಯಿತು. ತಕ್ಷಣವೇ ಕಾನ್ಸ್​ಟೇಬಲ್ ಮಂಜುನಾಥ್​ನನ್ನು ಬಂಧಿಸಿದ ಕಿಬ್ಬನಹಳ್ಳಿ ಪೊಲೀಸರು, ಆತನನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ನಟಿ ಮೀನಾ ಪತಿ ವಿದ್ಯಾಸಾಗರ್ ಅಕಾಲಿಕ​ ಸಾವಿಗೆ ನಿಖರ ಕಾರಣ ತಿಳಿಸಿದ ತಮಿಳುನಾಡು ಆರೋಗ್ಯ ಸಚಿವ

ಕೈಕೋಳಕ್ಕೆ ಹೈಕೋರ್ಟ್ ಕೊಕ್​​!; ಬಲವಾದ ಕಾರಣವಿಲ್ಲದೆ ಆರೋಪಿಗೆ ಬೇಡಿ ತೊಡಿಸುವಂತಿಲ್ಲ..

ತಮ್ಮ ಸಿನಿ ಜೀವನದ ಅತ್ಯಂತ ಕೆಟ್ಟ ಸಿನಿಮಾದ ಹೆಸರನ್ನು ಬಹಿರಂಗಪಡಿಸಿದ ನಟಿ ಪೂಜಾ ಹೆಗ್ಡೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 1 =
Remember me
