ಬೆಂಗಳೂರು:ಯೂಕ್ರೇನ್​ನ ಖಾರ್ಕೀವ್​ನಲ್ಲಿ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಹುತಾತ್ಮರಾದ ಸ್ಥಳದಲ್ಲಿ ರಷ್ಯಾ‌ ಶೆಲ್ ದಾಳಿ ಮುಂದುವರಿದಿರುವ ಕಾರಣ ಮೃತದೇಹ ಪತ್ತೆಗೆ ಅಡ್ಡಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪರೋಕ್ಷವಾಗಿ ಹೇಳಿದರು.
ಆರ್​ಟಿ ನಗರದ ತಮ್ಮ ನಿವಾಸದ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಯೂಕ್ರೇನ್​ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಯೂಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.
ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಯೂಕ್ರೇನ್​ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.
ಕಾಲೇಜಿನಲ್ಲಿ ಡಿಬಾರ್ ಮಾಡಿದ್ದಕ್ಕೆ ಲೇಡಿಸ್​ ಪಿಜಿಯ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ದುರಂತ ಸಾವು

ನಿಮ್ಮಿಂದಲೇ ರಷ್ಯಾಗೆ ಗ್ರೀನ್​ ಸಿಗ್ನಲ್​ ಸಿಕ್ಕಿದ್ದು… ನ್ಯಾಟೋ ವಿರುದ್ಧವೇ ತಿರುಗಿಬಿದ್ದ ಯೂಕ್ರೇನ್​ ಅಧ್ಯಕ್ಷ!

ರಾಧೆ ಶ್ಯಾಮ್​ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ ಜತೆ ಕಿಸ್ಸಿಂಗ್​ ಸೀನ್​: ಅಚ್ಚರಿಯ ಹೇಳಿಕೆ ನೀಡಿದ ನಟ ಪ್ರಭಾಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
