ವಿಜಯನಗರ:ಅಪಾರ ಪ್ರಮಾಣದ ಅವಧಿ ಮೀರಿದ ಮಾತ್ರೆಗಳು ಹೊಸಪೇಟೆಯ ಹೊರವಲಯದಲ್ಲಿ ಪತ್ತೆಯಾಗಿವೆ. ಲಕ್ಷಾಂತರ ಮೌಲ್ಯದ ಮಾತ್ರೆಗಳು ಎಂದು ಅಂದಾಜಿಸಲಾಗಿದೆ.
ಸಂಡೂರು ರಸ್ತೆಯ LFS ಶಾಲೆ ಬಳಿ ಅವಧಿ ಮೀರಿದ ಮಾತ್ರೆಗಳು ಪತ್ತೆಯಾಗಿವೆ. ಗರ್ಭಿಣಿಯರು, ಬಾಣಂತಿಯರು ಮತ್ತು ಅಪೌಷ್ಟಿಕತೆಯಿಂದ ಬಳಲುವವರಿಗೆ ನೀಡುವ ಮಾತ್ರೆಗಳಾಗಿದ್ದು, ಈ ಘಟನೆ ಸರ್ಕಾರದ ದುರಾವಸ್ಥೆಗೆ ಹಿಡಿದ ಕನ್ನಡಿಯಾಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿಗಳಿಗೆ ಹೊರಗಡೆ ಚೀಟಿ ಬರೆದು ಕೊಡಲಾಗುತ್ತಿದೆ. ಅದರ ಬದಲು ಈ ಔಷಧಿಗಳನ್ನು ಬಡವರಿಗೆ ನೀಡಿದ್ದರೆ, ಎಷ್ಟೋ ಅನುಕೂಲವಾಗುತ್ತಿತ್ತು. ಇದೀಗ ಅವಧಿ ಮೀರಿರುವುದರಿಂದ ಎಲ್ಲವನ್ನು ಹೊರಗಡೆ ತಂದು ಚೆಲ್ಲಲಾಗಿದೆ. ಸರ್ಕಾರಿ ಆಸ್ಪತ್ರೆಗಳ ದುರಾಡಳಿತ ಎಷ್ಟರಮಟ್ಟಿಗೆ ಇದೆ ಎಂಬುದಕ್ಕೆ ಈ ಘಟನೆ ಕಾರಣವಾಗಿದೆ.
ಸದ್ಯ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಆರೋಗ್ಯ ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಚಾಕೊಲೇಟ್​ ಕೊಡಿಸೋ ನೆಪದಲ್ಲಿ ಮಗುವನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಕಾಡುತ್ತಿದೆ ಕಲ್ಲಿದ್ದಲು ಕೊರತೆ, ವಿದ್ಯುತ್ ಅಭಾವ ಭೀತಿ; 81 ಸ್ಥಾವರಗಳಲ್ಲಿ ನಿಶ್ಚಿತ ದಾಸ್ತಾನಿಲ್ಲ

ಮೇ 16ರಂದು ಶಾಲೆಗಳು ಪುನಾರಂಭ; 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − ten =
Remember me
