ವಿಜಯನಗರ:ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ ಮುಂದುವರೆಸುತ್ತೇವೆ ಎಂದು ವಿಜಯನಗರ ಪೊಲೀಸ್​ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಆರೋಪಿ ಭೋಜರಾಜ, ನಿರ್ಮಾಲಾ ಎಂಬ ಯುವತಿಯ ರುಂಡ ಕತ್ತರಿಸಿ ಪೊಲೀಸ್ ಠಾಣೆಗೆ ರುಂಡ ಸಮೇತ ಬಂದಿದ್ದ. ಭೋಜರಾಜ ನಿರ್ಮಲಾಳನ್ನು ಪ್ರೀತಿಸುತ್ತಿದ್ದ. ನಿರ್ಮಲಾ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಳು. ನಿರ್ಮಲಾಳನ್ನು ಮದುವೆ ಮಾಡಿಕೊಡುವಂತೆ ಈ ಮೊದಲು ಆಕೆಯ ಪಾಲಕರಲ್ಲಿ ಈತ ಕೇಳಿದ್ದ. ಆದರೆ ಆಕೆಯ ಮನೆಯವರು ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೇರೊಬ್ಬಳನ್ನು ಎರಡು ತಿಂಗಳ ಹಿಂದೆ ಮದುವೆಯಾಗಿದ್ದ. ಆದರೆ ನಿರ್ಮಲಾಳ ಮೇಲೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ. ಬೇರೊಂದು ಊರಿನಲ್ಲಿ ಬಿಎಸ್ಸಿ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ನಿರ್ಮಲಾ, ಪರೀಕ್ಷೆಗಾಗಿ ಓದಲು ಊರಿಗೆ ಬಂದಿದ್ದಳು. ಇದೇ ಸಮಯಕ್ಕೆ ಕಾಯುತ್ತಿದ್ದ ಈ ಪಾಗಲ್​ ಪ್ರೇಮಿ, ಮಚ್ಚಿನಿಂದ ಆಕೆಯ ತಲೆ ಕಡಿದು ರುಂಡದೊಂದಿಗೆ ಠಾಣೆಗೆ ಶರಣಾಗಿದ್ದಾನೆ.(ದಿಗ್ವಿಜಯ ನ್ಯೂಸ್​)
ಮಾಲಕಿಯನ್ನೇ ಭೀಕರವಾಗಿ ಕೊಂದ ಪಿಟ್​ಬುಲ್​ ಶ್ವಾನವನ್ನು ದತ್ತು ಪಡೆಯಲು ಜನರು ಮುಗಿಬೀಳುತ್ತಿರುವುದೇಕೆ!?

https://www.vijayavani.net/interest-to-act-with-uppi-and-yash/
ವಿಕ್ರಾಂತ್ ರೋಣ: ಯಾವ ಭಾಷೆ ಇದ್ದರೂ ಕನ್ನಡದಲ್ಲೇ ಕೇಳಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + six =
Remember me
