ವಿಜಯನಗರ:ಬಸ್​ ಮತ್ತು ಬೈಕ್​ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ನೇಹಿತರಿಬ್ಬರು ದುರಂತ ಸಾವಿಗೀಡಾಗಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರಿನ ಬಳಿ ಬುಧವಾರ (ಮೇ.4) ನಡೆದಿದೆ.
ಬೈಕ್​ಗೆ ಬಸ್​ ಗುದ್ದಿದ ರಭಸಕ್ಕೆ ಕಿರಣ್(23) ಸ್ಥಳದಲ್ಲೇ ಮೃತಪಟ್ಟರೆ, ವೆಂಕಟೇಶ್​ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸ್ನೇಹಿತರಿಬ್ಬರು ಕಾಕುಬಾಳು ಮೂಲದವರು.
ಗಾದಿಗನೂರಿನ ಜಾತ್ರೆಯ ಊಟ ಮುಗಿಸಿದ ಸ್ನೇಹಿತರಿಬ್ಬರು ಬೈಕ್​ ಏರಿ ಕಾಕುಬಾಳು ಕಡೆಗೆ ಹೊರಟಿದ್ದರು. ಇದೇ ಸಂದರ್ಭದಲ್ಲಿ ಹೊಸಪೇಟೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಸಪೇಟೆಯ ಗ್ರಾಮೀಣ ಠಾಣಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಸುಳ್ಳು ಮಾಹಿತಿ ನೀಡಿದ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿದ ಚಾಮರಾಜನಗರದ ಜಿಲ್ಲಾಧಿಕಾರಿ

ತುಂಬಿದ ಗ್ರಾಮ ಸಭೆಯಲ್ಲಿ ಸರ್ಕಾರಿ ಅಧಿಕಾರಿಗೆ ಚಪ್ಪಲಿಯಲ್ಲಿ ಬಾರಿಸಿದ ಗ್ರಾ.ಪಂ ಉಪಾಧ್ಯಕ್ಷೆಗೆ ಮರುಕ್ಷಣವೇ ಶಾಕ್!​

10 ವರ್ಷದ ಮಗಳನ್ನು ಕಾಮತೃಷೆಗೆ ಬಳಸಿಕೊಳ್ತಿದ್ದ ಉಪ ತಹಸೀಲ್ದಾರ್​ಗೆ ಘನ ಘೋರ ಶಿಕ್ಷೆ ವಿಧಿಸಿದ ಕೋರ್ಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
