ವಿಜಯನಗರ:ಪೊಲೀಸ್​ ಇಲಾಖೆ ತಲೆತಗ್ಗಿಸುವಂತಹ ಘಟನೆಯೊಂದು ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ದೂರು ನೀಡಲು ಠಾಣೆಗೆ ಬಂದ ವ್ಯಕ್ತಿಯ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಪೊಲೀಸ್​ ಪೇದೆಯೊಬ್ಬರ ವಿರುದ್ಧ ಕೇಳಿಬಂದಿದ್ದು, ತಕ್ಷಣ ಆರೋಪಿ ಪೇದೆಯನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಜಿಲ್ಲೆಯ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್​ ಮಾರೆಪ್ಪ ವಿರುದ್ಧ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ ಆರೋಪ ಕೇಳಿಬಂದಿದ್ದು, ಸದ್ಯ ಅಮಾನತು ಶಿಕ್ಷೆಗೆ ಒಳಗಾಗಿದ್ದಾರೆ. ಈತ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಂಗಾರಕ್ಕನ ಗುಡ್ಡದ ನಿವಾಸಿ.
ದೂರು ನೀಡಲು ಬಂದ ವ್ಯಕ್ತಿಯ ಮಗಳ ಜೊತೆಗೆ ಮಾರೆಪ್ಪ ಫೋನ್​ ಸಂಭಾಷಣೆ ನಡೆಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡಿದ್ದಾರೆಂದು ಹೇಳಲಾಗಿದೆ. ಲೈಂಗಿಕ ಕ್ರಿಯೆಗೆ ಸಹಕರಿಸಿದರೆ ಪ್ರಕರಣವನ್ನು ನಿಮ್ಮ ಪರವಾಗಿ ಮಾಡುತ್ತೇನೆ. ನಿನ್ನ ಮೇಲೆ ನನಗೆ ಮನಸ್ಸಾಗಿದೆ. ಎಲ್ಲಾದರೂ ಹೋಗಿ ಇಬ್ಬರು ಸೇರೋಣ ಎಂದು ಮಾರೆಪ್ಪ ಫೋನ್​ ಮೂಲಕ ಒತ್ತಾಯ ಮಾಡಿದ್ದಾರೆಂದು ದೂರಲಾಗಿದೆ.
ಫೋನ್​ನಲ್ಲಿ ತೆಲುಗು ಭಾಷೆಯಲ್ಲಿ ಮಾರೆಪ್ಪ ಸಂಭಾಷಣೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಲೈಂಗಿಕ ಕ್ರಿಯೆಯ ಸಮ್ಮತಿಗೆ ಒತ್ತಾಯ ಮಾಡಿರುವ ದೂರಿನ ಆಧಾರದ ಮೇಲೆ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಕೊಟ್ಟೂರು ಪೊಲೀಸ್ ಠಾಣೆಯಲ್ಲೇ ಮಾರೆಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಔಷಧ ಚೀಟಿಯಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸ್ಟಾರ್ ಆಗುತ್ತಿರುವ ಡಾಕ್ಟರ್​ ಇವರು! ಅಂಥದ್ದೇನಿದೆ ಈ ಚೀಟಿಯಲ್ಲಿ?

ಈವರೆಗೂ ನೋಡಿರದ ಮೀರಾ ಜಾಸ್ಮಿನ್ ಹಾಟ್​ ಅವತಾರ! ಮಲಯಾಳಿ ಬ್ಯೂಟಿಯ ಮೈಮಾಟಕ್ಕೆ ಫ್ಯಾನ್ಸ್​ ಫಿದಾ

ಕಲಬುರಗಿ: 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ​ ಬಲೆಗೆ ಬಿದ್ದ ಇಬ್ಬರು ಕಾನ್ಸ್​ಟೇಬಲ್​​ಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + nineteen =
Remember me
